ಮೈಸೂರು

ಆರೋಗ್ಯ ಕೇಂದ್ರದಲ್ಲಿ ಸಸಿ ನೆಡುವ ಕಾರ್ಯಕ್ರಮ

Published On :

ಕ.ಪ್ರ.ವಾರ್ತೆ   ಬೈಲುಕುಪ್ಪೆ   ಜು. 15
ಕೊಪ್ಪ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಶನಿವಾರ ಗಿಡನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾವೇರಿ ಪರಿಸರ ರಕ್ಷಣಾ ಬಳಗ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಸ್ಪತ್ರೆ ಆವರಣದಲ್ಲಿ ಹಾಗೂ ರಸ್ತೆ ಬದಿಯಲ್ಲಿ ಗಿಡ ನೆಡಲಾಯಿತು.
ಈ ವೇಳೆ ಮಾತನಾಡಿದ ಪಿರಿಯಾಪಟ್ಟಣ ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ಎಂ.ಎಸ್. ಚಿಣ್ಣಪ್ಪ, ಪ್ರತಿಯೊಬ್ಬರು ಪರಿಸರಕ್ಕೆ ಕೊಡುಗೆ ನೀಡುವಂತಾಗಬೇಕು. ಈ ಮೂಲಕ ಉತ್ತಮ ವಾತಾವರಣ ನಿರ್ಮಾಣ ಸಾಧ್ಯ ಎಂದರು.
ಬಳಿಕ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಮಚಂದ್ರ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಮಾತನಾಡಿ, ಪ್ರತಿಯೊಬ್ಬರು ಪರಿಸರ ಕಾಳಜಿ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಇದೇ ವೇಳೆ ಆಸ್ಪತ್ರೆ ಆವರಣದಲ್ಲಿ ವಿವಿಧ ಜಾತಿಯ 15 ಗಿಡಗಳನ್ನು ನೆಡಲಾಯಿತು. ಜಿಪಂ ಸದಸ್ಯೆ ಕಾವೇರಿ ಶೇಖರ್, ತಾಪಂ ಸದಸ್ಯರಾದ ನವಿಲೂರು ಮಹದೇವ್, ಗ್ರಾಪಂ ಉಪಾಧ್ಯಕ್ಷೆ ಸಾವಿತ್ರಿ ರಾಮಣ್ಣ, ಸದಸ್ಯರಾದ ರಾಮಚಂದ್ರ, ಚಂದ್ರಶೇಖರ್, ರೇಣುಕಾ ಪ್ರಸಾದ್, ಮಾಜಿ ಅಧ್ಯಕ್ಷ ಕೆ.ಎಸ್. ರಾಜು, ಜಿಪಂ ಮಾಜಿ ಸದಸ್ಯ ಶೇಖರ್, ಯೋಗೇಶ್, ಮಾದೇಶ್‌ಕುಮಾರ್, ಕಾವೇರಿ ಪರಿಸರ ರಕ್ಷಣಾ ಬಳಗದ ಸಂಚಾಲಕ ವನಿತಾ ಚಂದ್ರಮೋಹನ್, ಬಬೀಂದ್ರ ಪ್ರಸಾದ್, ಚಂದ್ರಮೋಹನ್, ಸಹಾಯಕ ವಲಯ ಅರಣ್ಯಾಧಿಕಾರಿಗಳಾದ ನಂಜಪ್ಪ, ರವೀಂದ್ರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.