ಮೈಸೂರು

ಗ್ರಾಪಂನಿಂದ ಕಾನೂನು ವಿರೋಧಿ ತೀರ್ಮಾನ

Published On :

ದೂರ (ಮೈಸೂರು ತಾ): ದೂರ ಗ್ರಾಪಂ ಬಿಲ್‌ಕಲೆಕ್ಟರ್ ಸ್ವಾಮಿ ಅವರನ್ನು ಅಮಾನತುಗೊಳಿಸಿದ್ದರೂ ಗ್ರಾಪಂ ಸಾಮಾನ್ಯ ಸಭೆಯು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳುವ ಸಂಬಂಧ ನಿರ್ಣಯ ಕೈಗೊಂಡಿರುವುದು ಸರಿಯಲ್ಲ ಎಂದು ಗ್ರಾಪಂ ಸದಸ್ಯ ಟಿ.ಪಿ. ಪ್ರಕಾಶ್, ಮಾಜಿ ಅಧ್ಯಕ್ಷ ಜಯಮ್ಮ  ಹೇಳಿದ್ದಾರೆ.  ಅಧಿಕಾರ ದುರುಪಯೋಗ, ಭ್ರಷ್ಟಾಚಾರದಲ್ಲಿ ಸಿಲುಕಿರುವ ದೂರು ಗ್ರಾಪಂನ ಬಿಲ್‌ಕಲೆಕ್ಟರ್ ಡಿ.ಎಸ್.ಪಿ. ಸ್ವಾಮಿ ಅವರನ್ನು ಅಮಾನತುಗೊಳಿಸಿದ್ದರೂ ಗ್ರಾಪಂ ಅಧ್ಯಕ್ಷರು ಮತ್ತು ಕೆಲವು ಸದಸ್ಯರು ಕಾನೂನು ಬಾಹಿರವಾಗಿ ಅವರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳುವ ಸಂಬಂಧ ಸಾಮಾನ್ಯಸಭೆಯಲ್ಲಿ ತೀರ್ಮಾನ ಕೈಗೊಂಡಿರುವುದು ಸರಿಯಲ್ಲ. ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಜಿಪಂ ಸಿಇಒ ಅವರಿಗೆ ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಅಲ್ಲದೆ ಗ್ರಾಪಂ ಪಿಡಿಒ ಚೇತನ ಅವರ ಕೈ ಕೆಳಗೆ ನಾನು ಕೆಲಸ ಮಾಡುವುದಿಲ್ಲ. ಎಂಬ ನೆಪ ಹೇಳುವ ಸ್ವಾಮಿ ಅವರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಬಾರದು ಎಂದು  ಅವರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.