ಮೈಸೂರು

ಬೆಟ್ಟದಪುರ ಬಳಿ ಚಿರತೆ: ಗ್ರಾಮಸ್ಥರ ಆತಂಕ

Published On :

ಪಿರಿಯಾಪಟ್ಟಣ: ತಾಲೂಕಿನ ಬೆಟ್ಟದಪುರ ವ್ಯಾಪ್ತಿಯ ಕೂರ್ಗಲ್ ಹಾಗೂ ಬೆಟ್ಟದ ತಪ್ಪಲಿನ ಸೀತೆಬೆಟ್ಟ ಎಂಬಲ್ಲಿ ಚಿರತೆಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬೆಟ್ಟದಪುರ ಸಮೀಪದ ಶ್ರೀ ಸಿಡಿಲುಮಲ್ಲಿಕಾರ್ಜುನ ಬೆಟ್ಟದ ಸುತ್ತಲಿನ ಗ್ರಾಮಗಳಲ್ಲಿ ಇತ್ತೀಚಿನ ಕೆಲವು ದಿನಗಳಿಂದ ಚಿರತೆ ಹಾವಳಿ ಕಂಡುಬಂದಿದ್ದು, ಮೇಕೆ ಮತ್ತು ನಾಯಿಗಳನ್ನು ಎಳೆದೊಯ್ದಿದ್ದವು. ಭಾನುವಾರ ಹಾಗೂ ಸೋಮವಾರದಂದು ಕೂರ್ಗಲ್ ಹಾಗೂ ಸೀತೆಬೆಟ್ಟ ಎಂಬಲ್ಲಿ ಸಾರ್ವಜನಿಕರಿಗೆ 3 ಚಿರತೆಗಳು ಕಾಣಿಸಿಕೊಂಡಿವೆ. ಇದರಿಂದ ಭಯಗೊಂಡಿರುವ ಅಕ್ಕಪಕ್ಕದ ಗ್ರಾಮಸ್ಥರು ತಮ್ಮ ಜಾನುವಾರುಗಳನ್ನು ಜಮೀನುಗಳಿಗೆ ಬಿಡುತ್ತಿಲ್ಲ. ಚಿರತೆ ಕಂಡುಬಂದ ಸ್ಥಳದಲ್ಲಿ ಬೋನ್ ಇಡಲು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯ ಇಲಾಖೆ ಉಪ ವಲಯ ಅರಣ್ಯಾಧಿಕಾರಿ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.