ಮೈಸೂರು

ನುಗು ನಾಲೆ ಕಿರು ಸೇತುವೆ ಕಾಮಗಾರಿಗೆ ಚಾಲನೆ

Published On :

ಕ.ಪ್ರ.ವಾರ್ತೆ   ನಂಜನಗೂಡು   ಜು. 15
ತಾಲೂಕಿನ ಸಿಂಧುವಳ್ಳಿ ಗ್ರಾಮದ ಸಮೀಪ ನುಗುನಾಲೆಗೆ 12 ಲಕ್ಷ ವೆಚ್ಚದ ಕಿರುಸೇತುವೆ ಕಾಮಗಾರಿಗೆ ಸಂಸದ ಆರ್.ಧ್ರುವನಾರಾಯಣ್ ಸೋಮವಾರ ಭೂಮಿ ಪೂಜೆ ನೆರವೇರಿಸಿದರು. ನಂತರ ಅವರು ಮಾತನಾಡಿ, ಪಟ್ಟಣದ ರೇಲ್ವೆ ಕೆಳ ಸೇತುವೆಯ ದುರಸ್ತಿ ಕಾರ್ಯವನ್ನು 8 ಲಕ್ಷ ವೆಚ್ಚದಲ್ಲಿ ನಡೆಸಲಾಗುವುದು. ಕೌಲಂದೆ ರೇಲ್ವೆ ನಿಲ್ದಾಣದಲ್ಲಿ ಕ್ರಾಸಿಂಗ್ ಪಾಯಿಂಟ್ ನಿರ್ಮಿಸಲು ಹಾಗೂ ನಂಜನಗೂಡು-ಮೈಸೂರು ನಡುವೆ ಹೆಚ್ಚುವರಿ ರೈಲು ಓಡಿಸಲು ಮತ್ತು ಚಾಮರಾಜನಗರದ ರೇಲ್ವೆ ನಿಲ್ದಾಣದಲ್ಲಿ ರಾತ್ರಿ ವಸ್ತಿಯಾದ ರೈಲು ಬೆಳಗ್ಗೆ ನಂಜನಗೂಡಿನಿಂದ ಮೈಸೂರಿಗೆ ತೆರಳುವ ವ್ಯವಸ್ಥೆ ಕಲ್ಪಿಸುವಂತೆ ಕೇಂದ್ರ ರೇಲ್ವೆ ಸಚಿವ ಎಂ.ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಮಾಡಲಾವುದು ಎಂದು ಹೇಳಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಸ್. ಸುಬ್ಬಣ್ಣ, ಬಿ.ಎಸ್. ಮಹದೇವಪ್ಪ, ಮುಖಂಡರಾದ ಯು.ಎನ್. ಪದ್ಮನಾಭರಾವ್ ಗ್ರಾಪಂ ಅಧ್ಯಕ್ಷೆ ತಾಯಮ್ಮ, ಉಪಾಧ್ಯಕ್ಷ ಬಸವರಾಜು ತಾಪಂ ಸದಸ್ಯ ಲಕ್ಷ್ಮಿನಾಗರಾಜು, ಕುರಹಟ್ಟಿ ಮಹೇಶ್, ಪುರಸಭಾ ಸದಸ್ಯ ದೊರೆಸ್ವಾಮಿ, ನಾಗೇಂದ್ರ, ಎಇಇ ಮಂಜುನಾಥ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.