ವರುಣ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಮೈಸೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ವರುಣ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ಮಂಡ್ಯ ಜಿಲ್ಲೆ ಕೊಮ್ಮೇನಹಳ್ಳಿ ನಿವಾಸಿ ರಾಮೇಗೌಡ ಎಂಬವರ ಪುತ್ರ ಸಿದ್ದ (40) ಆತ್ಮಹತ್ಯೆ ಮಾಡಿಕೊಂಡವರು. ಮೃತರ ಶವ ಸೋಮವಾರ ಬೆಳಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಭಾನುವಾರ ಕೆರೆಗೆ ಹಾರಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೈಸೂರು ದಕ್ಷಿಣ ಠಾಣೆ ಎಸ್ಐ ವೆಂಕಟೇಶಯ್ಯ ಮತ್ತು ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರೈಲಿಗೆ ಸಿಕ್ಕಿ ಅಪರಿಚಿತ ವ್ಯಕ್ತಿ ಸಾವು
ಮೈಸೂರು: ಮಂಡ್ಯ ಜಿಲ್ಲೆ ಮಂದಗೆರೆ- ಹಾಸನ ಜಿಲ್ಲೆ ಹೊಳೇನರಸೀಪುರ ರೈಲು ನಿಲ್ದಾಣಗಳ ಮಧ್ಯೆ 35 ವರ್ಷದ ಅಪರಿಚಿತ ವ್ಯಕ್ತಿ ಶನಿವಾರ ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ. ಚಹರೆ- 5.6 ಅಡಿ ಎತ್ತರ, ಗೋದಿ ಮೈಬಣ್ಣ, ದೃಢಕಾಯ ಶರೀರ, ಮುಖ ಜಜ್ಜಿ ಹೋಗಿದ್ದು, ಕಪ್ಪು ಬಣ್ಣದ ಪ್ಯಾಂಟ್, ಕೆಂಪು ಬಣ್ಣದ ಟೀ- ಶರ್ಟ್ ಧರಿಸಿದ್ದಾರೆ. ಮೃತ ವ್ಯಕ್ತಿಯ ದೇಹವನ್ನು ಹಾಸನದ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತರ ವಾರಸುದಾರರು ಇದ್ದಲ್ಲಿ ದೂ.0821- 2516579 ಸಂಪರ್ಕಿಸಲು ಮೈಸೂರು ರೇಲ್ವೆ ಠಾಣೆ ಪೊಲೀಸರು ಕೋರಿದ್ದಾರೆ.
ಜೂಜಾಟ: ನಾಲ್ವರ ಬಂಧನ
ಮೈಸೂರು: ತಾಲೂಕಿನ ಕೆ.ಸಾಲುಂಡಿ ಬಳಿಯ ಬಾಯಿ ಕೆಂಚೇಗೌಡ ಮಾವಿನ ತೋಪಿನ ರಸ್ತೆಯಲ್ಲಿ ಜೂಜಾಡುತ್ತಿದ್ದ 4 ಮಂದಿಯನ್ನು ಜಯಪುರ ಠಾಣೆ ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ. ಕೆ. ಸಾಲುಂಡಿ ನಿವಾಸಿಗಳಾದ ಮಂಜು, ಸಣ್ಣೇಗೌಡ, ಎಸ್. ಮಹದೇವ ಮತ್ತು ಚಂದ್ರ ಬಂಧಿತ ಆರೋಪಿಗಳು. ಇವರು ಪಣಕ್ಕಿಟ್ಟಿದ್ದ 1490 ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಗ್ರೀನ್ ಬಡ್ಸ್ ಎಂಡಿಗೆ ಜಾಮೀನು
ಮೈಸೂರು: ಗ್ರೀನ್ ಬಡ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರವೀಂದ್ರನಾಥ್ಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಹೂಡಿಕೆದಾರರಿಗೆ ಕೋಟ್ಯಂತರ ರು.ಗಳನ್ನು ವಂಚಿಸಿರುವ ಆರೋಪ ಎದುರಿಸುತ್ತಿರುವ ರವೀಂದ್ರನಾಥ್ ಜಾಮೀನು ಕೋರಿ ನಗರದ 3ನೇ ಸಿಜೆಎಂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಸೋಮವಾರ ವಿಚಾರಣೆ ನಡೆಯಿತು. ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕಿದೆ ಎಂದು ಮನವಿ ಮಾಡಿದ್ದರಿಂದ ಜು.29 ರವರೆಗೆ ಷರತ್ತುಬದ್ಧ ತಾತ್ಕಾಲಿಕ ಜಾಮೀನು ಮಂಜೂರು ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

