ಶಿಕ್ಷಕರ ವೇತನ ತಾರತಮ್ಯ ಬಗ್ಗೆ ಪ್ರಸ್ತಾಪ: ಭರವಸೆ
ಕೆ.ಆರ್. ನಗರ: ಪ್ರೌಢಶಾಲಾ ಸಹ ಶಿಕ್ಷಕರ ವೇತನ ತಾರತಮ್ಯ ನೀತಿ ಸಮಸ್ಯೆ ಸೇರಿದಂತೆ ಇತರ ಸವಲತ್ತು ಕಲ್ಪಿಸಲು ವಿಧಾನಸಭೆಯಲ್ಲಿ ವಿಷಯ ಚರ್ಚಿಸಿ ಶಿಕ್ಷಕರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ ಎಂದು ಶಾಸಕ ಸಾ.ರಾ. ಮಹೇಶ್ ಭರವಸೆ ನೀಡಿದರು.
ಇಲ್ಲಿನ ಗುರುಭವನದಲ್ಲಿ ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಶಿಕ್ಷಕರ ನಡುವೆ ವೇತನದಲ್ಲಿ ತಾರತಮ್ಯ ಇದ್ದು, ಇದು ಸರಿಯಾದ ಕ್ರಮವಲ್ಲ ಎಂದರು.
ಡಿಂಡಿಮ ಶಂಕರ್ ಮಾತನಾಡಿದರು. ಚುಂಚನಕಟ್ಟೆ ಸರ್ಕಾರಿ ಪ್ರೌಢಶಾಲೆಯ ಜಯಮ್ಮ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಬಿಇಒ ಎಸ್.ಟಿ. ಜವರೇಗೌಡ, ಎಸ್ಐ ವನರಾಜ್, ನಾರಾಯಣ, ಕೆ.ಟಿ. ಚಾಮರಾಜೇಗೌಡ, ಕೆ. ಬಸವಯ್ಯ, ರಾಮಸ್ವಾಮಿ, ವಜ್ರಮುನಿ, ತ್ರಿವೇಣಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

