ಮೈಸೂರು

ಪೌರ ಕಾರ್ಮಿಕರ ಕಾಯಂಗೆ ಒತ್ತಾಯ

Published On :

ಕ.ಪ್ರ. ವಾರ್ತೆ   ಮೈಸೂರು   ಜು. 17
ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಕಾಯಂಗೊಳಿಸುವಂತೆ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರ ಸಭೆ, ಪುರಸಭೆಗಳ ಪೌರ ಕಾರ್ಮಿಕರ ಮಹಾಸಂಘ ಒತ್ತಾಯಿಸಿದೆ.
ಗುತ್ತಿಗೆ ಪದ್ಧತಿ ರದ್ದುಗೊಳಿಸುವ ಸರ್ಕಾರದ ತೀರ್ಮಾನ ಸ್ವಾಗತ. ಆದರೆ, ಕಳೆದ 15- 20 ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ಪೌರಕಾರ್ಮಿಕರನ್ನು ಕಾಯಂಗೊಳಿಸಬೇಕು. ತಪ್ಪಿದರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಮಹಾಸಂಘದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮೇಯರ್ ನಾರಾಯಣ ಬುಧವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು.
ಪೌರ ಕಾರ್ಮಿಕರು ಆರ್ಥಿಕ, ಶೈಕ್ಷಣಿಕ, ಸಮಾಜಿಕ ಮತ್ತು ರಾಜಕೀಯವಾಗಿ ಬಹಳ ಹಿಂದುಳಿದಿದ್ದಾರೆ. ಆದ್ದರಿಂದ ಪೌರ ಕಾರ್ಮಿಕರ ಗುತ್ತಿಗೆ ಪದ್ಧತಿ ರದ್ದುಪಡಿಸಿ ತಮ್ಮನ್ನು ಕಾಯಂಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರೊಡನೆ ಚರ್ಚಿಸಲಾಗಿತ್ತು. ಈಗ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಗುತ್ತಿಗೆ ಪದ್ಧತಿ ರದ್ದುಪಡಿಸುವ ಘೋಷಣೆ ಮಾಡಿದ್ದಾರೆ. ಅದರಂತೆ ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸಬೇಕು ಎಂದ ಅವರು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದ್ದು, ಕಾಯಂಗೊಳಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.
ಸಂಘದ ಜಿಲ್ಲಾಧ್ಯಕ್ಷ ಮಾರ, ಉಪಾಧ್ಯಕ್ಷ ಆರ್. ಶಿವ, ನಗರ ಪಾಲಿಕೆ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ವೆಂಕಟೇಶ್, ಕಾರ್ಯಾಧ್ಯಕ್ಷ ಮಂಚಯ್ಯ, ಗೌರವ ಕಾರ್ಯದರ್ಶಿ ಜಿ. ಮಹದೇವ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.