ಮೈಸೂರು

ಮೌಲ್ಯಮಾಪನ ಕೇಂದ್ರದಲ್ಲಿಯೇ ನಡೆದ ಕಾರ್ಯಕ್ರಮ

Published On :

ಮೈಸೂರು: ಮೈಸೂರು ವಿವಿ 2012- 13ನೇ ಸಾಲಿನ ಸ್ನಾತಕ ಪದವಿ ಪರೀಕ್ಷೆ ನಡೆಸಿದ್ದು, ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಭರದಿಂದ ನಡೆಯುತ್ತಿದೆ. ಆದರೆ, ಸದರಿ ಮೌಲ್ಯಮಾಪನ ಕೇಂದ್ರದಲ್ಲಿಯೇ ಬುಧವಾರ ಭೂಗೋಳ ವಿಜ್ಞಾನ ಸಂಘವು ಕಾರ್ಯಕ್ರಮ ಆಯೋಜಿಸಿದ ವಿಲಕ್ಷಣ ಘಟನೆ ನಡೆದಿದೆ. ಮೈಸೂರು ವಿವಿ ಪರೀಕ್ಷಾ ಭವನದಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ಮೌಲ್ಯಮಾಪನ ಕಾರ್ಯ ನಡೆಯುತ್ತಿದೆ. ಇನ್ನು ಎರಡು ಮೂರು ದಿನಗಳಲ್ಲಿ ಮೌಲ್ಯಮಾಪನ ಮುಗಿಯಲಿದೆ. ಹಾಗೆ ಭೂಗೋಳಶಾಸ್ತ್ರದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬುಧವಾರ ಮುಗಿಯುತ್ತಿದ್ದರಿಂದ ಎಲ್ಲಾ ಅಧ್ಯಾಪಕರು ಒಂದೇ ಜಾಗದಲ್ಲಿ ಸೇರುತ್ತಾರೆ. ಹಾಗಾಗಿ ಇಲ್ಲಿಯೇ ಕಾರ್ಯಕ್ರಮ ನಡೆಸುವುದು ಸೂಕ್ತ ಎಂಬ ನಿರ್ಧಾರಕ್ಕೆ ಬಂದ ಸಂಘದ ಸದಸ್ಯರು ಕಾರ್ಯಕ್ರಮ ಆಯೋಜಿಸಿದ್ದಾರೆ.ಢಿಆದರೆ, ಸದರಿ ಕೇಂದ್ರದಲ್ಲಿ ಸಮಾಜಶಾಸ್ತ್ರ, ಸಂವಹನ ಮತ್ತು ಪತ್ರಿಕೋದ್ಯಮ, ಕಂಪ್ಯೂಟರ್ ಸೈನ್ಸ್, ಮನೋವಿಜ್ಞಾನ ಪತ್ರಿಕೆಗಳ ಮೌಲ್ಯಮಾಪನವೂ ನಡೆಯುತ್ತಿತ್ತು. ಈ ಕಾರ್ಯಕ್ರಮದಲ್ಲಿ ಧ್ವನಿವರ್ಧಕ ಬಳಸಿದ್ದರಿಂದ ಮೌಲ್ಯಮಾಪನಕ್ಕೆ ಅಡಚಣೆಯೂ ಉಂಟಾಯಿತು. ಎಲ್ಲದಕ್ಕಿಂತ ಹೆಚ್ಚಾಗಿ ಈ ಬೆಳವಣಿಗೆಗಳೂ ಮೈಸೂರು ವಿವಿ ಕುಲಪತಿ ಪ್ರೊ. ಕೆ.ಎಸ್. ರಂಗಪ್ಪ ಅವರ ಸಮ್ಮುಖದಲ್ಲೆ ನಡೆದಿದ್ದು ಆಶ್ವರ್ಯ ಉಂಟು ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.