ಮೈಸೂರು

ಉದ್ಯಮಿ ಅಪಹರಣ: ಮೂವರ ಸೆರೆ

Published On :

ಕ.ಪ್ರ.ವಾರ್ತೆ   ಮೈಸೂರು   ಜು. 18
ಉದ್ಯಮಿ ಟಿ. ಪ್ರಭಾಕರ್ ಶೆಟ್ಟಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರು ನಿವಾಸಿಗಳಾದ ಶೇಖರ ಅ. ಕರಿಯ (23), ಮಂಜುನಾಥ ಅ. ಕರಿ ಮಂಜು (27) ಮತ್ತು ಅಶೋಕ ಅ. ಆಕಾಶ್ (29) ಬಂಧಿತ ಆರೋಪಿಗಳು. ಈ ಮೂವರು ಮೂಲತಃ ಬೇರೆ ಬೇರೆ ಜಿಲ್ಲೆಯ ನಿವಾಸಿಗಳಾಗಿದ್ದು, ಬೆಂಗಳೂರಿನಲ್ಲಿ ಆಟೋ ಮತ್ತು ಕಾರು ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಪ್ರಭಾಕರ್ ಶೆಟ್ಟಿ ಅಪಹರಣಕ್ಕೆ ಸುಪಾರಿ ನೀಡಿದ್ದ ಲಿಂಗರಾಜು, ಆತನ ಸಹಚರರಾದ ಸುರೇಶ್, ಶಿವು, ಗುರುಮೂರ್ತಿ ಮತ್ತು ಶ್ರೀಕಂಠನ್ ಎಂಬವರನ್ನು ಈಗಾಗಲೇ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಪ್ರಕರಣದ ಪ್ರಮುಖ ಆರೋಪಿ ಅನಿಲ್ ಇನ್ನೂ ತಲೆ ಮರೆಸಿಕೊಂಡಿದ್ದಾನೆ. ಆತನಿಗಾಗಿ ಶೋಧ ಮುಂದುವರಿಸಲಾಗಿದೆ. ಮತ್ತೊಬ್ಬ ಆರೋಪಿ ಮಾದೇಶ್ ಎಂಬಾತನು ಬೆಂಗಳೂರಿನಲ್ಲಿ ಕೊಲೆಯಾಗಿದ್ದಾನೆ ಎಂದು ಎಸ್ಪಿ ಅಭಿನವ್ ಖರೆ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಲಿಂಗರಾಜು ಉದ್ಯಮಿ ಪ್ರಭಾಕರ್ ಶೆಟ್ಟಿ ಅಪಹರಣಕ್ಕಾಗಿ ಸುಪಾರಿ ನೀಡಿದ್ದ. ಅದರಂತೆ ಸುಪಾರಿ ಪಡೆದವರು ಶೆಟ್ಟಿಯನ್ನು ಜೂನ್ ಮೊದಲ ವಾರದಲ್ಲಿ ಅಪಹರಿಸಿ ಲಿಂಗರಾಜುಗೆ ಒಪ್ಪಿಸಿ ಹೋಗಿದ್ದರು. ಲಿಂಗರಾಜು ಬಳಿಯಿದ್ದ ಶೆಟ್ಟಿ ಅವರು ತಪ್ಪಿಸಿಕೊಂಡು ಬಂದು ಪೊಲೀಸರ ಮುಂದೆ ಅಪಹರಣ ವೃತ್ತಾಂತ ಬಿಚ್ಚಿಟ್ಟಿದ್ದರು. ಬಳಿಕ ಲಿಂಗರಾಜು ಮತ್ತು ಸಹಚರರನ್ನು ಪೊಲೀಸರು ಬಂಧಿಸಿದ್ದರು. ಸುಪಾರಿ ಪಡೆದ ತಂಡದ ಮೂವರು ಈಗ ಸಿಕ್ಕಿ ಬಿದ್ದಿದ್ದಾರೆ.
ಹೆಚ್ಚುವರಿ ಎಸ್ಪಿ ಆರ್.ಬಿ. ಮೋಹನ್ರೆಡ್ಡಿ, ಡಿವೈಎಸ್ಪಿ ಟಿ. ಸಿದ್ದಪ್ಪ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ಗಳಾದ ನೇಮಿರಾಜು, ಟಿ. ಅಶೋಕ್ಕುಮಾರ್, ಪ್ರಸನ್ನಕುಮಾರ್, ಚಂದ್ರಶೇಖರ್, ರಘು, ಎಸ್ಐಗಳಾದ ಹರೀಶ್, ಎಚ್.ಬಿ. ವೆಂಕಟೇಶಯ್ಯ, ಪುನೀತ್, ರಮೇಶ್ ಮತ್ತು ಸಿಬ್ಬಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.