ಮೈಸೂರು

ಶಂಕಿತ ಡೆಂಘೀ ಜ್ವರಕ್ಕೆ ಯುವಕ ಬಲಿ

Published On :

ಕ.ಪ್ರ.ವಾರ್ತೆ   ಪಿರಿಯಾಪಟ್ಟಣ   ಜು. 18
ಶಂಕಿತ ಡೆಂಘೀ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಜರುಗಿದೆ.
ತಾಲೂಕಿನ ಅಳಲೂರು ಗ್ರಾಮದ ಲೇ. ಬೊಮ್ಮಯ್ಯ ಎಂಬವರ ಪುತ್ರ ಅಶೋಕ (22) ಡೆಂಘೀ ಜ್ವರಕ್ಕೆ ಬಲಿಯಾಗಿರುವ ಯುವಕ.
ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಈತ, ಇಲ್ಲಿನ ಸೇಂಟ್ ಮೇರಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಪಿರಿಯಾಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹೋದಾಗ ಡೆಂಘೀ ಎಂದು ದೃಢಪಟ್ಟ ಪರಿಣಾಮ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಯಿತು.
ಅಲ್ಲಿ ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದಾನೆ. ವರದಿಯ ಪ್ರಕಾರ ಅಶೋಕನನ್ನು ಪರೀಕ್ಷಿಸಿದ ವೈದ್ಯರು, ಈತ ಶಂಕಿತ ಡೆಂಘೀ ಜ್ವರದಿಂದ ಬಳಲುತ್ತಿರುವುದನ್ನು ಖಚಿತಪಡಿಸಿದ್ದರು.
ಮೃತನ ಸ್ವಗ್ರಾಮವಾದ ಅಳಲೂರು ಗ್ರಾಮದಲ್ಲಿ ಶವಸಂಸ್ಕಾರ ನೆರವೇರಿತು. ಮೃತ ಅಶೋಕನ ಪೋಷಕರ ದುಃಖ ಮುಗಿಲುಮುಟ್ಟಿತ್ತು. ಈತನ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಅಲ್ಲಿಂದ ವರದಿ ಬಂದ ನಂತರ ಈ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಾಗಲಿವೆ.
ಸ್ಥಳಕ್ಕೆ ತಾ. ಆರೋಗ್ಯಾಧಿಕಾರಿ ಡಾ.ಶಶಿಕಲಾ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಅಳಲೂರು ಗ್ರಾಮಕ್ಕೆ ಭೇಟಿ ನೀಡಿದ್ದು, ಡೆಂಘೀ ಜ್ವರದ ಬಗ್ಗೆ ಎಚ್ಚರದಿಂದ ಇರುವಂತೆ ಸಾರ್ವಜನಿಕರಿಗೆ ತಿಳಿಸಿ, ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಇದರಿಂದ ತಾಲೂಕಿನ ಜನತೆ ಆತಂಕಕ್ಕೀಡಾಗಿದ್ದು, ತಾಲೂಕು ಆಡಳಿತ ಹೆಚ್ಚಿನ ನಿಗಾ ವಹಿಸಬೇಕೆಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.