ವೃದ್ಧೆಯ ಚಿನ್ನದ ಸರ ಅಪಹರಣ
ಮೈಸೂರು: ಹಾಲು ತರಲು ಅಂಗಡಿಗೆ ಹೋಗುತ್ತಿದ್ದ ವೃದ್ಧೆಯ ಚಿನ್ನದ ಸರವನ್ನು ಬೈಕಿನಲ್ಲಿ ಬಂದ ವ್ಯಕ್ತಿಯೊಬ್ಬ ಅಪಹರಿಸಿಕೊಂಡು ಹೋಗಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಗೋಕುಲಂ ನಿವಾಸಿ ಲೇ. ಕೆಂಪೇಗೌಡ ಎಂಬವರ ಪತ್ನಿ ಲಕ್ಷ್ಮಮ್ಮ (75) ಹಾಲು ತರುವ ಸಲುವಾಗಿ 5ನೇ ಮುಖ್ಯರಸ್ತೆಯಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬೈಕಿನಲ್ಲಿ ಬಂದ ವ್ಯಕ್ತಿ 30 ಗ್ರಾಂ. ಚಿನ್ನದ ಸರ ಎಗರಿಸಿಕೊಂಡು ಪರಾರಿಯಾಗಿದ್ದಾನೆ. ಈ ಸಂಬಂಧ ವಿವಿ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಾಂಶುಪಾಲ ಆತ್ಮಹತ್ಯೆ
ಮೈಸೂರು: ನರ್ಸಿಂಗ್ ಕಾಲೇಜು ಪ್ರಾಂಶುಪಾಲರೊಬ್ಬರು ಲಾಡ್ಜ್ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ವಿಜಯನಗರ ನಿವಾಸಿ ಗುರುಪ್ರಸಾದ್ (51) ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ಇವರು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಗೌತಮ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರು. ಇವರು ಇರ್ವಿನ್ ರಸ್ತೆಯಲ್ಲಿರುವ ನಂದಿನಿ ಲಾಡ್ಜ್ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಬಾಧೆ ಆತ್ಮಹತ್ಯೆಗೆ ಕಾರಣ ಇರಬಹುದು ಎಂದು ಪ್ರಕರಣ ದಾಖಲಿಸಿಕೊಂಡಿರುವ ಲಷ್ಕರ್ ಠಾಣೆ ಪೊಲೀಸರು ಶಂಕಿಸಿದ್ದಾರೆ.
ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ
ಮೈಸೂರು: ವ್ಯಕ್ತಿಯೊಬ್ಬರು ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದೆ. ಮೈಸೂರು ತಾಲೂಕು ಮೊಸಂಬಾನಹಳ್ಳಿ ನಿವಾಸಿ ಬಸವರಾಜು ಅ. ಮಹದೇವಸ್ವಾಮಿ (45) ಆತ್ಮಹತ್ಯೆ ಮಾಡಿಕೊಂಡವರು. ಪತ್ನಿ ಮತ್ತು ಇತರರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೈಸೂರು ದಕ್ಷಿಣ ಠಾಣೆ ಎಸ್ಐ ವೆಂಕಟೇಶಯ್ಯ ಮತ್ತು ಸಿಬ್ಬಂದಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ವ್ಯಕ್ತಿ ಆತ್ಮಹತ್ಯೆ: ವಾರಸುದಾರರ ಪತ್ತೆಗೆ ಮನವಿ
ಮೈಸೂರು: ನಗರದ ಇರ್ವಿನ್ ರಸ್ತೆ ಕನಿಷ್ಕಾ ಲಾಡ್ಜ್ನಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತರ ವಾರಸುದಾರರು ಪತ್ತೆಯಾಗಿಲ್ಲ. ಲಾಡ್ಜ್ ರೂಂ ಪಡೆಯುವಾಗ ಕನಕಪುರ ಬಸ್ ನಿಲ್ದಾಣ ರಸ್ತೆ ಕಾಳಪ್ಪ ಬಿಲ್ಡಿಂಗ್ ನಿಲಾಸಿ ಪ್ರಸಾದ್ ಎಂದು ವಿಳಾಸ ನೀಡಿದ್ದಾರೆ. ಚಹರೆ- 50 ವರ್ಷ, 5.4 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು, ಕೋಲು ಮುಖ, ಗುಂಗುರು ಕೂದಲು, ಬಿಳಿಗೆರೆವುಳ್ಳ ಶರ್ಟ್, ಕಾಫಿ ಬಣ್ಣದ ಪ್ಯಾಂಟ್ ಧರಿಸಿದ್ದಾರೆ. ಮೃತರ ವಾರಸುದಾರರು ಇದ್ದಲ್ಲಿ ದೂ. 0821- 2418313, 513 ಸಂಪರ್ಕಿಸಲು ಮಂಡಿ ಠಾಣೆ ಪೊಲೀಸರು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

