ಮೈಸೂರು

ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣ ಮುಖ್ಯ

Published On :

ಕ.ಪ್ರ.ವಾರ್ತೆ   ಮೈಸೂರು   ಜು. 19
ಶಿಕ್ಷಣದೊಂದಿಗೆ ಸರ್ವತೋಮುಖ ಅಭಿವೃದ್ಧಿಯೂ ಮುಖ್ಯ ಎಂದು ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ ಉಪನಿರ್ದೇಶಕ ಬಿ.ವಿ. ರವಿಕುಮಾರ್ ಹೇಳಿದರು.  
ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ಸಮಗ್ರ ಗುಣಮಟ್ಟ ನಿರ್ವಹಣಾ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಪದವಿಪೂರ್ವ ಶಿಕ್ಷಣ ಯುವಜನತೆಗೆ ನಿರ್ಣಯಕ ಘಟ್ಟವಾಗಿದ್ದು, ಅದನ್ನು ಸದುಪಯೋಗಪಡಿಸಿಕೊಳ್ಳುವ ಅಗತ್ಯವಿದೆ. ಅಲ್ಲದೆ, ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿಗೆ ಕೇವಲ ಶಿಕ್ಷಮವೊಂದೇ ಸಾಲದು, ಸಾಂಸ್ಕೃತಿಕ ಹಾಗೂ ದೈಹಿಕ ಚಟುವಟಿಕೆ ಹಮ್ಮಿಕೊಂಡು ಸಮಗ್ರ ಬೆಳವಣಿಗೆಗೆ ಮುಂದಾಗಬೇಕು ಎಂದರು.
ವಾಣಿಜ್ಯ, ಇತಿಹಾಸ, ವಿಜ್ಞಾನ ಹಾಗೂ ಇನ್ನಿತರ ಯಾವುದೇ ವಿಷಯಗಳಲ್ಲಿ ಯಾವುದು ಹೆಚ್ಚಲ್ಲ ಅಥವಾ ಯಾವುದು ಕಡಿಮೆಯಲ್ಲ. ಆದ್ದರಿಂದ ವಿದ್ಯಾರ್ಥಿಗಳು ಯಾವ ವಿಷಯದಲ್ಲಿ ಆಸಕ್ತಿ ವಹಿಸುವರು ಅದನ್ನು ಪೋಷಕರು ಪ್ರೋತ್ಸಾಹಿಸಬೇಕು. ತಂದೆ- ತಾಯಿಗಳು ಈ ವಿಷಯದಲ್ಲಿ ಒತ್ತಡ ಹೇರಬಾರದು ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಸಂಸ್ಥೆ ಕಾರ್ಯದರ್ಶಿ ಹಾಗೂ ಮಾಜಿ ಮೇಯರ್ ಪಿ. ವಿಶ್ವನಾಥ್, ಈಗಿನ ಸೆಮಿಸ್ಟರ್ ಪದ್ಧತಿಯಲ್ಲಿ ವೇಗವಾಗಿ ಹಾಗೂ ಸತತವಾಗಿ ಕಲಿತರೆ ಮಾತ್ರವೇ ನಿರೀಕ್ಷಿತ ಫಲಿತಾಂಶ ಪಡೆಯಲು ಸಾಧ್ಯ ಎಂದ ಅವರು, ವಿದಾರ್ಥಿಗಳು ತಪ್ಪದೇ ಹೆಲ್ಮೆಟ್ ಧರಿಸುವ ಮೂಲಕ ಸುರಕ್ಷತೆಯ ಚಾಲನೆಗೆ ಮುಂದಾಗಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಗುಂಡಪ್ಪಗೌಡ ಅವರು 2012- 13ನೇ ಸಾಲಿನ ಕಾಲೇಜಿನ ವಾರ್ಷಿಕ ಸಂಚಿಕೆ ಬಿಡುಗಡೆಗೊಳಿಸಿದರು. ಖಜಾಂಚಿ ಎಸ್.ಎನ್. ಲಕ್ಷ್ಮೀನಾರಾಯಣ ಮುಖ್ಯ ಅತಿಥಿಯಾಗಿದ್ದರು. ಪ್ರಾಂಶುಪಾಲ ಪ್ರೊ. ಶಿವರಾಮು ಕಾಡನಕುಪ್ಪೆ, ಸಂಚಾಲಕ ಪ್ರೊ. ಎಚ್.ಕೆ. ಶಿವರಾಮ್ ಇದ್ದರು. ಪ್ರೊ. ಜಿ. ಚಂದ್ರಶೇಖರ್ ಸ್ವಾಗತಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.