ಮೈಸೂರು

ಪರಿಸರ ಶುಚಿಗೊಳಿಸಿ ರೋಗದಿಂದ ಮುಕ್ತರಾಗಿ

Published On :

ಕ.ಪ್ರ.ವಾರ್ತೆ   ಹುಣಸೂರು   ಜು. 20
ಮನೆಯ ಸುತ್ತಮುತ್ತಲಿನ ಪರಿಸರ ಮತ್ತು ವಾತಾವರಣವನ್ನು ಶುಚಿಗೊಳಿಸುವ ಮೂಲಕ ಇತ್ತೀಚೆಗೆ ಹರಡುತ್ತಿರುವ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಮಹಿಳಾ ಸ್ವಸಹಾಯ ಸಂಘಗಳು ಹಾಗೂ ಸಾರ್ವಜನಿಕರ ಸಹಕಾರ ಮುಖ್ಯವಾಗಿದೆ ಎಂದು ಶಾಸಕ ಎಚ್.ಪಿ. ಮಂಜುನಾಥ್ ತಿಳಿಸಿದರು.
ತಾಲೂಕಿನ ಹನಗೋಡಿನ ಸುಮಿತ್ರಮ್ಮ ಶಿವನಂಜೇಗೌಡರ ಕಲ್ಯಾಣ ಮಂಟಪದಲ್ಲಿ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಆರೋಗ್ಯ ಇಲಾಖೆ ಹಾಗೂ ಗ್ರಾಪಂ ಸಹಕಾರದೊಂದಿಗೆ ಆಯೋಜಿಸಿದ್ದ ಆರೋಗ್ಯ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಾಂಕ್ರಾಮಿಕ ಕಾಯಿಲೆಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ, ಜನಪ್ರತಿನಿಧಿಗಳೊಂದಿಗೆ ಕೈ ಜೋಡಿಸಿ ಗ್ರಾಮಗಳಲ್ಲಿ ಬೀದಿ ಮತ್ತು ಚರಂಡಿಯ ಸ್ವಚ್ಛತೆಯನ್ನು ನಾವೇ ಮಾಡಿಕೊಳ್ಳುವ ಮೂಲಕ ಸೊಳ್ಳೆಗಳ ನಿಯಂತ್ರಣಕ್ಕೆ ಸಹಕಾರ ನೀಡಬೇಕೆಂದು ಕರೆ ನೀಡಿದರು.
ರಾಜ್ಯದಲ್ಲಿ 2407 ಮಂದಿ ಡೆಂಘೀ ಶಂಕಿತರಿದ್ದು ಈವರೆಗೆ 11 ಮಂದಿ ಸಾವಿಗೀಡಾಗಿದ್ದಾರೆ. ಡೆಂಘೀ ತಗುಲಿದವರಿಗೆ ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ನಿಗದಿಗೊಳಿಸಿದ್ದು, ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಕಾಯಿಲೆ ಬಂದವರು ಆತಂಕಕ್ಕೆ ಒಳಗಾಗದೆ ಕೂಡಲೇ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದರು.
ಪ್ರಶಂಸೆ: ಶ್ರೀ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ರಚಿಸಿರುವ ಮಹಿಳಾ ಸ್ವಸಹಾಯ ಸಂಘಗಳನ್ನು ಒಂದೆಡೆ ಸೇರಿಸಿ ಸಂಘಟಿಸುವ ಮೂಲಕ ಉಳಿತಾಯ, ಆದಾಯ, ಆರೋಗ್ಯ, ಉದ್ಯೋಗ ಬಗ್ಗೆ ಸಮಗ್ರ ತಿಳಿವಳಿಕೆ ನೀಡುವ ಮೂಲಕ ಉತ್ತಮ ಕಾರ್ಯವೆಸಗಿದ್ದಾರೆ ಎಂದು ಶಾಸಕರು ಪ್ರಶಂಸಿಸಿದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಮಹದೇವಪ್ಪ ಸಾಂಕ್ರಾಮಿಕ ಖಾಯಿಲೆಗಳ ಕುರಿತು ಮಾಹಿತಿ ನೀಡಿದರು. ಧರ್ಮಸ್ಥಳ ಯೋಜನೆಯ ತಾಲೂಕು ಸಂಯೋಜಕ ರಾಮು, ನೀರು ಬಳಕೆದಾರರ ಮಹಾಮಂಡಳದ ಮಾಜಿ ಅಧ್ಯಕ್ಷೆ ಸುಧಾಮಣಿ, ತಾಪಂ ಸದಸ್ಯರಾದ ಎಚ್.ಆರ್. ರಮೇಶ್, ಗಣಪತಿ, ಕಾರ್ಯನಿರ್ವಾಹಕ ಅಧಿಕಾರಿ ಮಹದೇವಸ್ವಾಮಿ, ತಹಸೀಲ್ದಾರ್ ಶಿವಾನಂದ್ ಮೂರ್ತಿ, ಮಂಜುಳಾ ಮಹೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.