ಮೈಸೂರು

ಪಿಂಚಣಿ ಸಮಸ್ಯೆ ಇದ್ದಲ್ಲಿ ಅದಾಲತ್‌ನಲ್ಲಿ ತಿಳಿಸಿ

Published On :

ಟಿ. ನರಸೀಪುರ: ಪಿಂಚಣಿಗೆ ಸಂಬಂಧಿಸಿದಂತೆ ಯಾವುದೆ ಸಮಸ್ಯೆಗಳಿದ್ದರೂ ಹೋಬಳಿ ಮಟ್ಟದಲ್ಲಿ ನಡೆಯುವ ಅದಾಲತ್‌ನಲ್ಲಿ ತಿಳಿಸುವಂತೆ ತಹಸೀಲ್ದಾರ್ ಎಚ್.ಎಸ್. ಅರುಣಪ್ರಭ ಹೇಳಿದರು. ತಾಲೂಕಿನ ತುಂಬಲ ಗ್ರಾಮದಲ್ಲಿ ನಡೆದ ಕಸಬಾ ಹೋಬಳಿಯ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಪಿಂಚಣಿಗಾಗಿ ತಾಲೂಕು ಕಚೇರಿಗೆ ಅಲೆಯುವುದನ್ನು ತಪ್ಪಿಸಲಾಗಿದೆ ಎಂದರು. ಕಿರಗಸೂರು ಹಾಗೂ ಹಳೇ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಈಗಾಗಲೇ ಮಾಡಲಾಗಿದೆ. ಜು.23 ರಂದು ತಾಲೂಕಿನ ಗರ್ಗೇಶ್ವರಿ ಗ್ರಾಮದಲ್ಲಿ ನಡೆಸಲಾಗುವುದು ಎಂದು ತಿಳಿಸಿದರು.ತಾಲೂಕು ಪಂಚಾಯಿತಿ ಅಧ್ಯಕ್ಷ  ತುಂಬಲ ಅಂದಾನಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಒಟ್ಟು 103 ಅರ್ಜಿಗಳು ಸ್ವೀಕೃತವಾಗಿ 62 ಮಂದಿಗೆ ಆದೇಶ ಪತ್ರ ವಿತರಿಸಲಾಯಿತು. ಜಿಪಂ ಸದಸ್ಯ ಕೆ. ಮಹಾದೇವ್ ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರ ವಿತರಿಸಿದರು. ಗ್ರಾಪಂ ಅಧ್ಯಕ್ಷ ಭಾಗ್ಯಮ್ಮ, ಕಂದಾಯಾಧಿಕಾರಿ ನಾಗೇಂದ್ರಪ್ಪ, ಗ್ರಾಮ ಲೆಕ್ಕಿಗರಾದ ಅಬ್ದುಲ್ ರಶೀದ್, ನಟರಾಜು, ಮುಖಂಡ ಗವಿಸಿದ್ದಯ್ಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.