ಮೈಸೂರು

ಮಠದ ಮೇಲೆ ಐಟಿ ದಾಳಿ ಖಂಡಿಸಿ ಪ್ರತಿಭಟನೆ

Published On :

ಎಚ್.ಡಿ. ಕೋಟೆ: ಬೆಂಗಳೂರಿನ ಆದಿಚುಂಚನಗಿರಿ ಮಠದ ಶಾಖೆ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ಖಂಡಿಸಿ ಸೋಮವಾರ ತಾಲೂಕು ಒಕ್ಕಲಿಗರ ಸಂಘ, ಒಕ್ಕಲಿಗರ ನೌಕರರ ಸಂಘ, ಪಟ್ಟಣದ ಒಕ್ಕಲಿಗರ ಸಂಘದ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಆದಿಚುಂಚನಗಿರಿ ಮಹಾಸಂಸ್ಥಾನ ಮಠವು ಅನೇಕ ವರ್ಷಗಳಿಂದಲೂ ಜಾತ್ಯತೀತವಾಗಿ ಅನ್ನ, ಅಕ್ಷರ, ಆರೋಗ್ಯ ದಾಸೋಹಗಳ ಜತೆಗೆ ದಾರ್ಮಿಕ ಚಟುವಟಿಕೆಗಳನ್ನು ನಿರಂತರವಾಗಿ ಮಾಡುತ್ತಿದೆ. ಆದರೆ ಮಠದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿರುವುದು ರಾಜಕೀಯ ಪ್ರೇರಿತವಾಗಿದೆ ಎಂದು ತಾಲೂಕು ಸಮುದಾಯವು ಆಕ್ರೋಶ ವ್ಯಕ್ತಪಡಿಸಿದೆ.
ಈ ದಾಳಿಯಿಂದ ಮಠದ ಭಕ್ತರನ್ನು, ಅಭಿಮಾನಿಗಳನ್ನು, ಸಮುದಾಯವನ್ನು ಕಡೆಗಣಿಸಿರುವುದಕ್ಕೆ ನಿದರ್ಶನವಾಗಿದೆ. ಈ ವಿಚಾರವಾಗಿ ರಾಜ್ಯ, ಕೇಂದ್ರ ಸರ್ಕಾರಗಳು ಮೌನ ವಹಿಸಿರುವುದು ಸರ್ಕಾರಗಳ ವೈಫಲ್ಯ ಎತ್ತಿ ತೋರಿಸುತ್ತಿದೆ ಎಂದು ಸಂಘದ ಪದಾಧಿಕಾರಿಗಳು ಟೀಕಿಸಿದ್ದಾರೆ. ಪ್ರತಿಭಟನಾಕಾರರು ತಹಸೀಲ್ದಾರ್ ಕೆಂಪೇಗೌಡ ಅವರಿಗೆ ಮನವಿ ಸಲ್ಲಿಸಿದರು.
ಮುಂದಿನ ದಿನಗಳಲ್ಲಿ ಮಠದ ಮೇಲೆ ದಾಳಿ ನಡೆಸಿ ಗೌರವಕ್ಕೆ ಧಕ್ಕೆ ತರುವ ಕೃತ್ಯ ಎಸಗಿದರೆ, ಸಮುದಾಯದ ವತಿಯಿಂದ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ತಾಲೂಕು ಅಧ್ಯಕ್ಷ ನರಸಿಂಹೇಗೌಡ, ಪಟ್ಟಣದ ಅಧ್ಯಕ್ಷ ನಾಗೇಗೌಡ, ನೌಕರರ ಕ್ಷೇಮಾಭಿವೃದ್ಧಿ ವೇದಿಕೆ ಅಧ್ಯಕ್ಷ ರವಿಗೌಡ, ಶ್ರೀನಿವಾಸ್, ಮಲ್ಲೇಶ್, ವೆಂಕಟೇಶ್, ಬೈರೇಗೌಡ, ಕಲ್ಲೇಶ್‌ಗೌಡ, ರಾಮಚಂದ್ರ, ಮೈಮುಲ್ ನಿರ್ದೇಶಕ ಈರೇಗೌಡ, ಬೋರೇಗೌಡ, ರಾಜೇಂದ್ರ, ಎಂ.ಸಿ. ದೊಡ್ಡನಾಯಕ, ಜಿಪಂ ಮಾಜಿ ಸದಸ್ಯ ರವಿ, ಸಿ.ವಿ. ನಾಗರಾಜು, ಗೋಪಾಲಸ್ವಾಮಿ, ರಾಮು, ಮಹೇಶ್, ಶಂಕರಲಿಂಗೇಗೌಡ, ಹೊ.ಕೆ. ಮಹೇಂದ್ರ, ಮಾರುತಿ, ಸತೀಶ್, ಬಸವರಾಜು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.