ಮೈಸೂರು

ನಾಲ್ಕು ದಿನಗಳ ಚಲನಚಿತ್ರ ರಸಗ್ರಹಣ ಶಿಬಿರ

Published On :

ಕ.ಪ್ರ.ವಾರ್ತೆ ,  ಮೈಸೂರು ,  ಜು. 23
ಮೈಸೂರು ವಿವಿ ಸಾಮಾರ್ಥ್ಯಾಭಿವೃದ್ಧಿ ಮತ್ತು ಉದ್ಯೋಗಾವಕಾಶಗಳ ಸೇವಾ ಕೇಂದ್ರವು ಜು.27 ರಿಂದ 30 ರವರೆಗೆ ಚಲನಚಿತ್ರ ರಸಗ್ರಹಣ ಶಿಬಿರ ಏರ್ಪಡಿಸಿದೆ. ಸಿಪಿಡಿಪಿಎಸ್ ಸಭಾಂಗಣದಲ್ಲಿ ಜು.27ರ ಸಂಜೆ 5ಕ್ಕೆ ಸರೋದ್ ವಾದಕ ಪಂ. ರಾಜೀವ ತಾರಾನಾಥ ಶಿಬಿರ ಉದ್ಘಾಟಿಸಲಿದ್ದು, ಮೈಸೂರು ವಿವಿ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಅಧ್ಯಕ್ಷತೆ ವಹಿಸುವರು. ಪ್ರೊ.ಎನ್.ಎಸ್. ರಘುನಾಥ, ಡಾ.ನ.ರತ್ನ, ಡಾ.ಕೃಷ್ಣ ಮನವಳ್ಳಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು. ಈ ನಾಲ್ಕು ದಿನ ಸಂಜೆ 5.30 ರಿಂದ ರಾತ್ರಿ 8 ರವರೆಗೆ ಶಿಬಿರ ನಡೆಯಲಿದೆ ಎಂದು ಕೇಂದ್ರದ ನಿರ್ದೇಶಕ ಪ್ರೊ.ನಿರಂಜನ ವಾನಳ್ಳಿ ತಿಳಿಸಿದ್ದಾರೆ. ಆಸಕ್ತ 75 ವಿದ್ಯಾರ್ಥಿಗಳಿಗೆ ಶಿಬಿರದಲ್ಲಿ ಭಾಗವಹಿಸುವ ಅವಕಾಶವಿದ್ದು, ಆಸಕ್ತರು ಜು.26 ರೊಳಗೆ ಸಿಪಿಡಿಪಿಎಸ್ ಕೇಂದ್ರದಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ದೂ. 0821- 2419332 ಸಂಪರ್ಕಿಸಿರಿ,

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.