ಮೈಸೂರು

ಸ್ವಂತ ಕಾಸಲ್ಲಿ ರಸ್ತೆ ದುರಸ್ತಿ

Published On :

ಕ.ಪ್ರ.ವಾರ್ತೆ ,  ಮೈಸೂರು ,  ಜು. 23
ರಸ್ತೆ ದುರಸ್ತಿ ಪಡಿಸಿಕೊಡುವಂತೆ ಹಲವಾರು ಬಾರಿ ಜನಪ್ರತಿನಿಧಿಗಳ ಬಳಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಲಿಲ್ಲ. ಇದರಿಂದ ಬೇಸತ್ತು ಇಲ್ಲಿನ ಮಂಡಕಳ್ಳಿಯ ಆಶ್ರಯ ಬಡಾವಣೆಯ ನಿವಾಸಿಗಳು ಸ್ವಂತ ವೆಚ್ಚದಲ್ಲಿ ರಸ್ತೆ ದುರಸ್ತಿ ಮಾಡಿಸಿಕೊಂಡಿದ್ದಾರೆ.
ಚಾಮರಾಜ ವಿಧಾನಸಭಾ ಕ್ಷೇತ್ರದ ಆಶ್ರಯ ಫಲಾನುಭವಿಗಳಿಗೆ ಮಂಡಕಳ್ಳಿಯಲ್ಲಿ ಮನೆಗಳನ್ನು ನಿರ್ಮಿಸಿ, ಹಂಚಿಕೆ ಮಾಡಲಾಗಿದೆ. ಆದರೆ ಅಲ್ಲಿ ನಿವಾಸಿಗಳಿಗೆ ಸರಿಯಾದ ರಸ್ತೆಗಳಿಲ್ಲದೆ ಓಡಾಡಲು ಪ್ರತಿದಿನ ಸಾರ್ವಜನಿಕರು ಮತ್ತು ನಿವಾಸಿಗಳು ನರಕಯಾತನೆ ಅನುಭವಿಸುತ್ತಿದ್ದರು.
ಸುಮಾರು 10 ವರ್ಷಗಳ ಹಿಂದೆಯೇ ಹಂಚಿಕೆ ಮಾಡಿದ್ದ, ಬಡಾವಣೆಯಲ್ಲಿ ಸಮರ್ಪಕವಾದ ಮೂಲಭೂತ ಸೌಕರ್ಯಗಳನ್ನು ಒದಗಿಸದೆ ಇರುವ ಬಗ್ಗೆ ಪಾಲಿಕೆಗೆ ಮತ್ತು ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೆ ಕ್ರಮ ವಹಿಸದೆ ನಿರ್ಲಕ್ಷ್ಯ ತೋರಿದರು. ಇದರಿಂದ ಬೇಸತ್ತ ಫಲಾನುಭವಿಗಳು ತಾವೆ ಒಗ್ಗೂಡಿ ಹಣ ಸಂಗ್ರಹಿಸಿ, ಜೆಸಿಬಿ ಮೂಲಕ ಬಡಾವಣೆಯ ರಸ್ತೆಗಳನ್ನು ದುರಸ್ತಿಪಡಿಸಿ, ಗಿಡಗಂಟೆಗಳು ಬೆಳೆದು ಕಾಡುಮಯವಾಗಿದ್ದ ರಸ್ತೆಗಳನ್ನು ಸ್ವಚ್ಛಪಡಿಸಿ, ಸುಗಮ ಸಂಚಾರಕ್ಕಾಗಿ ರಸ್ತೆ ಮಾಡಿಕೊಂಡರು.
ಈಗಲಾದರೂ ಈ ಬಡಾವಣೆಗೆ ವಿದ್ಯುತ್ ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸಿ, ಸೂಕ್ತ ವಾತಾವರಣ ನಿರ್ಮಾಣ ಮಾಡಿಕೊಡಲು ಜಿಲ್ಲಾಡಳಿತ ಮುಂದಾಗುವಂತೆ ಫಲಾನುಭವಿಗಳು ಮನವಿ ಮಾಡಿಕೊಂಡರು.
ಚಾಮರಾಜ ಕ್ಷೇತ್ರದ ಆಶ್ರಯ ಮನೆ ಫಲಾನುಭವಿಗಳ ಹಿತರಕ್ಷಣಾ ಸಮಿತಿ ಸಂಚಾಲಕ ಪಡುವಾರಹಳ್ಳಿ ಎಂ. ರಾಮಕೃಷ್ಣ, ತಮ್ಮಣ್ಣ, ಚನ್ನಪ್ಪ, ಈರೇಗೌಡ, ನಂಜೇಗೌಡ, ನಂಜುಂಡ, ಮೂರ್ತಿ, ಕಲ್ಯಾಣಮ್ಮ, ಮಾದಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.