ಮೈಸೂರು

ಶಿವರಾಜ್ ತಂಗಡಗಿ ಕೈಬಿಡದಂತೆ ಆಗ್ರಹ

Published On :

ಹುಣಸೂರು: ಸಚಿವ ಶಿವರಾಜ್ ತಂಗಡಗಿ ಅವರನ್ನು ಸಚಿವ ಸಂಪುಟದಿಂದ ಕೈಬಿಡಬಾರದೆಂದು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ತಾಲೂಕು ಭೋವಿ ಸಮಾಜ ಒತ್ತಾಯಿಸಿದೆ.
ಭೋವಿ ಸಮಾಜ ಶೋಷಿತ ವರ್ಗವಾಗಿದ್ದು, ಸಮಾಜದ ಅಭಿವೃದ್ಧಿಗೆ ಶ್ರಮಿಸಲು ಶಿವರಾಜ ತಂಗಡಗಿಯಂತಹ ಮಂತ್ರಿ ಅವಶ್ಯಕತೆ ಇದೆ. ಆದ್ದರಿಂದ ಕಾಂಗ್ರೆಸ್ ವರಿಷ್ಠರಾದ ಸೋನಿಯಗಾಂಧಿ, ರಾಹುಲ್‌ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರು ಸುಳ್ಳು ಆರೋಪಗಳಿಗೆ ಮಣಿಯದೆ, ತಂಗಡಗಿ ಅವರನ್ನು ಮುಂದುವರಿಸುವಂತೆ ಮನವಿ ಮಾಡಿದೆ. ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಅವರ ಕ್ಷೇತ್ರದಲ್ಲಿ ಎರಡು ಬಾರಿ ಜಯಗಳಿಸಿದ ಶಾಸಕ ಎಚ್.ಪಿ. ಮಂಜುನಾಥ್ ಅವರಿಗೆ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರಿಗೆ ಭೋವಿ ಸಮಾಜ ನಿಯೋಗ ತೆರಳಿ ಮನವಿ ಮಾಡಿದೆ ಎಂದು ಜನಾಂಗದ ಅಧ್ಯಕ್ಷ ಎಚ್.ವಿ. ಪರಮೇಶ್, ಗೌರವಾಧ್ಯಕ್ಷ ವೆಂಕಟೇಶ್, ವಿ. ಗಣೇಶ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.