ಮಕ್ಕಳಿಗೆ ಕಬ್ಬಿಣಾಂಶ ಮಾತ್ರೆ ವಿತರಣೆ
ಕ.ಪ್ರ. ವಾರ್ತೆ, ಭೇರ್ಯ, ಜು. 23
ಸರ್ವ ಶಿಕ್ಷಣದಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಬರುವ ಯೋಜನೆಗಳನ್ನು ಶಾಲೆಯಲ್ಲಿ ಸದ್ಬಳಕೆ ಮಾಡಿಕೊಂಡು ಸಮರ್ಪಕವಾಗಿ ಯೋಜನೆ ಯಶಸ್ವಿ ಮಾಡುವುದು ಶಿಕ್ಷಕರಿಂದ ಮಾತ್ರ ಸಾಧ್ಯ ಎಂದು ತಾಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ನಾಗಣ್ಣ ಹೇಳಿದರು.
ಕೆ.ಆರ್. ನಗರ ತಾಲೂಕಿನ ದೊಡ್ಡಕೊಪ್ಪಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಕ್ಕಳಿಗೆ ಕಬ್ಬಿಣಾಂಶದ ಮಾತ್ರೆಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಗ್ರಾಪಂ ಅಧ್ಯಕ್ಷೆ ಹೇಮಲತಾ ಮಂಜುನಾಥ್ ಚಾಲನೆ ನೀಡಿದರು.
ಮುಖ್ಯ ಶಿಕ್ಷಕ ಶಿವಪ್ಪ ಮಾತನಾಡಿ, ಕೇಂದ್ರ ಸರ್ಕಾರ 9 ಕೋಟಿ ವೆಚ್ಚದಲ್ಲಿ 6 ರಿಂದ 10ನೇ ತರಗತಿ ಹರಿಹರೆಯದ ಮಕ್ಕಳಲ್ಲಿ ಕಬ್ಬಿಣಾಂಶದ ಕೊರತೆಯಿಂದ ರಕ್ತಹೀನತೆ ರೋಗ ಮುಕ್ತ ಮಕ್ಕಳನ್ನಾಗಿ ಮಾಡಲು ಸರ್ಕಾರ ಈ ಯೋಜನೆ ಜಾರಿಗೊಳಿಸಿದೆ.
ಹಂಪಾಪುರ ಕ್ಲಸ್ಟರ್ ಸಿಆರ್ಪಿ ಶಂಕರೇಗೌಡ, ಎಸ್ಟಿಎಂಸಿ ಉಪಾಧ್ಯಕ್ಷೆ ಕನ್ಯಕುಮಾರಿ, ಸದಸ್ಯೆ ವಿಜಯಲಕ್ಷ್ಮಿ, ಸಹಶಿಕ್ಷಕರಾದ ನಾಗರಾಜೇಗೌಡ, ಚಂದ್ರಕಲಾ, ಲವೀನಪಿಂಟೋ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

