ವರ್ಗಾವಣೆ ನೀತಿ ಖಂಡಿಸಿ ಪ್ರತಿಭಟನೆ
ಮೈಸೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಕರ ಅವೈಜ್ಞಾನಿಕ ವರ್ಗಾವಣೆ ನೀತಿ ಬದಲಾಯಿಸಿ ಬ್ಯಾಂಕ್ ಮಾದರಿ ವರ್ಗಾವಣೆಗೆ ಆಗ್ರಹಿಸಿ ಸರ್ವಜನಾಂಗ ಹಿತರಕ್ಷಣಾ ವೇದಿಕೆಯವರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹುದ್ದೆಗೆ ಐಎಎಸ್, ಕೆಎಎಸ್ ಅಧಿಕಾರಿಗಳನ್ನು ನೇಮಿಸಬೇಕು. ಈಗಿರುವ ಬಡ್ತಿ ಅಧಿಕಾರಿಗಳನ್ನು ಶಾಲಾ ಕಾಲೇಜುಗಳಿಗೆ ಪಾಠ- ಪ್ರವಚನ ಮಾಡಲು ನಿಯೋಜಿಸಿ ಇಲಾಖೆಯ ದಕ್ಷತೆ ಹಾಗೂ ಪಾರದರ್ಶಕತೆ ಕಾಪಾಡಬೇಕು. ಶಿಕ್ಷಣ ಇಲಾಖೆಯಲ್ಲಿರುವ ಭ್ರಷ್ಟ ಅಧಿಕಾರಿಗಳು ಮತ್ತು ನೌಕರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ವೇದಿಕೆಯ ಅಧ್ಯಕ್ಷ ವೇಣುಗೋಪಾಲ್, ಮುಖಂಡರಾದ ಹಂ. ಲಕ್ಕೇಗೌಡ, ಬಿ.ಎಚ್. ಗೋವಿಂದೇಗೌಡ, ಎಂ. ಪ್ರಭುದೇವ, ಸಿದ್ದಯ್ಯ, ಬಿ. ಜಗದೀಶ್, ನಾಡನಹಳ್ಳಿ ಕೆ. ಸಿದ್ದರಾಜು, ಹೊನ್ನಪ್ಪಾಚಾರ್, ರಾಜಮ್ಮ, ತೇಜಮಣಿ, ಕೆ. ನಿಂಗೇಗೌಡ, ಶಂಕರ್, ಸಿ.ಟಿ. ತಮ್ಮಣ್ಣ, ಬಿ.ವಿ. ಕೆಂಚಪ್ಪ ಇದ್ದರು.
30ಕ್ಕೆ ಕೈಗಾರಿಕಾ ಕ್ಲಸ್ಟರ್ ಯೋಜನೆ ಬಗ್ಗೆ ಅರಿವು
ಮೈಸೂರು: ಮೈಸೂರು ಕೈಗಾರಿಕೆಗಳ ಸಂಘ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ತು ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗದೊಂದಿಗೆ ಜು. 30ರ ಬೆಳಗ್ಗೆ 10ಕ್ಕೆ ಕೈಗಾರಿಕೆಗಳ ಸಂಘದ ಸಭಾಂಗಣದಲ್ಲಿ ಕೈಗಾರಿಕಾ ಇಲಾಖೆಯ ಕ್ಲಸ್ಟರ್ ಅಭಿವೃದ್ಧಿ ಯೋಜನೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಿದೆ.
ಮೈಸೂರು ಕೈಗಾರಿಕೆಗಳ ಸಂಘದ ಅಧ್ಯಕ್ಷ ಪಿ. ವಿಶ್ವನಾಥ್ ಅಧ್ಯಕ್ಷತೆ ವಹಿಸುವರು. ಕೆಸಿಟಿಯು ವ್ಯವಸ್ಥಾಪಕ ನಿರ್ದೇಶಕ ವಿ. ಮುನಿಯಪ್ಪ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಎಂ. ಶಿವಶಂಕರ್ ಹಾಗೂ ಕೆನರಾ ಬ್ಯಾಂಕ್ ಉಪ ಪ್ರಧಾನ ವ್ಯವಸ್ಥಾಪಕ ಡಾ. ರಾಮಚಂದ್ರ, ಕೆಐಎಡಿಬಿಯ ಅಭಿವೃದ್ಧಿ ಅಧಿಕಾರಿ ಎಚ್.ಎಸ್. ಬಸವರಾಜ ಮಾತನಾಡುವರು. ಕ್ಲಸ್ಟರ್ ಯೋಜನೆಯಲ್ಲಿ ಭಾಗವಹಿಸಲು ಇಚ್ಛಿಸುವ ಮೈಸೂರು ಕೈಗಾರಿಕೆಗಳ ಸಂಘದಲ್ಲಿ ನೋಂದಾಯಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶಕುಮಾರ್ ಜೈನ್ ತಿಳಿಸಿದ್ದಾರೆ. ವಿವರಗಳಿಗೆ ಮೊ. 9986444654 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

