ಮೈಸೂರು

ಸರಗಳ್ಳರ ಹಿಡಿದ ಮೂವರಿಗೆ ಪ್ರಶಂಸನಾ ಪತ್ರ

Published On :

ಕ.ಪ್ರ.ವಾರ್ತೆ ಮೈಸೂರು ಜು. 25
ಮನೆಗೆ ನುಗ್ಗಿ ಮಹಿಳೆಯ ಸರ ಕಸಿದು ಪರಾರಿಯಾಗುತ್ತಿದ್ದ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿ ಸಮಯಪ್ರಜ್ಞೆ ಮೆರೆದ ಮೂವರಿಗೆ ನಗರ ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ ಗುರುವಾರ ಸಂಜೆ ತಮ್ಮ ಕಚೇರಿಯಲ್ಲಿ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದರು.
ಎಂಜಿನಿಯರಿಂಗ್ ವಿದ್ಯಾರ್ಥಿ ರಘುಕುಮಾರ್, ವ್ಯಾಪಾರಿ ಮೊಹಮ್ಮದ್ ನಯಾಜ್ ಮತ್ತು ಶ್ವಾನದಳ ಅಡುಗೆ ಕೆಲಸ ಮಾಡಿಕೊಂಡಿರುವ ಮಂಜುನಾಥ್ ಅವರಿಗೆ ಪ್ರಶಂಸನಾ ಪತ್ರ ನೀಡಿದರು.
ಬುಧವಾರ ಮಧ್ಯಾಹ್ನ ನಜರ್‌ಬಾದ್ ವಸಂತಮಹಲ್ ರಸ್ತೆಯಲ್ಲಿರುವ ಮನೆಗೆ ನುಗ್ಗಿದ ವ್ಯಕ್ತಿಯೊಬ್ಬ ಇಂದ್ರಾವತಿ ರಾಜೇಂದ್ರನ್ ಎಂಬವರ ಸರ ಕಸಿದು ಪರಾರಿಯಾಗುತ್ತಿದ್ದಾಗ ಈ ಮೂವರು ಆರೋಪಿ ಬೆನ್ನಟ್ಟಿ ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದರು. ಬಂಧಿತ ಆರೋಪಿ ಮಹೇಶ್ ಎಂಬಾತನು ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕು ಚಾಟಿಪುರ ನಿವಾಸಿ.
65 ಸರ ಅಪಹರಣ: ಈ ವರ್ಷ ಜನವರಿಯಿಂದ ಈವರೆಗೆ ನಗರದಲ್ಲಿ 65 ಸರ ಅಪಹರಣ ಪ್ರಕರಣಗಳು ನಡೆದಿವೆ. ಜುಲೈನಲ್ಲಿ ಈವರೆಗೂ 3 ಸರ ಅಪಹರಣ ಮಾತ್ರ ನಡೆದಿದ್ದು, ಎರಡು ಪ್ರಕರಣದ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ ತಿಳಿಸಿದರು.
ಬೆಂಗಳೂರು ದಕ್ಷಿಣ ವಿಭಾಗ ಮಾದರಿಯಲ್ಲಿ ಸರ ಅಪಹರಣ ತಡೆಯಲು ಕ್ರಮ ಕೈಗೊಳ್ಳಲಾಗಿದೆ. ರಾತ್ರಿ ಪಾಳಿಯಲ್ಲಿ 65 ಪೊಲೀಸರ ತಂಡಗಳು ಗಸ್ತಿನಲ್ಲಿದ್ದಾರೆ. ಸರ ಅಪಹರಣ ನಿಯಂತ್ರಣಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಆಗಸ್ಟ್‌ನಲ್ಲಿ ಟ್ರಾಫಿಕ್ ವಾರ್ಡನ್ ನೇಮಿಸಿಕೊಳ್ಳಲಾಗುತ್ತಿದೆ. ಆಸಕ್ತ ಸಾರ್ವಜನಿಕರನ್ನು ಟ್ರಾಫಿಕ್ ವಾರ್ಡನ್‌ಗಳಾಗಿ ನೇಮಿಸಿಕೊಳ್ಳಲಾಗುವುದು. ಹೀಗೆ ನೇಮಕವಾದವರು ವಾರದಲ್ಲಿ 4 ಗಂಟೆ ಸಿಗ್ನಲ್‌ನಲ್ಲಿ ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಸಿಎಆರ್ ಡಿಸಿಪಿ ಪ್ರಭಾಶಂಕರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.