ರಾಜ್ಯವನ್ನು ಗೋ ಹತ್ಯೆ ಮುಕ್ತವಾಗಿಸಲು ಒತ್ತಾಯ
ಕ.ಪ್ರ.ವಾರ್ತೆ ಮೈಸೂರು ಜು. 26
ಕರ್ನಾಟಕವನ್ನು ಗೋಹತ್ಯೆ ಮುಕ್ತ ರಾಜ್ಯವನ್ನಾಗಿ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಜಾ ವೇದಿಕೆ ಕಾರ್ಯಕರ್ತರು ಶುಕ್ರವಾರ ನಗರದ ಗಾಂಧಿಚೌಕದ ಗಾಂಧಿ ಪ್ರತಿಮೆ ಬಳಿ ಪ್ರತಿಭಟಿಸಿದರು.
ಅಹಿಂಸೆ ಪ್ರತಿಪಾದಿಸಿರುವ ಭಾರತೀಯ ಸಂಸ್ಕೃತಿಯ ಈ ನಾಡಿನಲ್ಲಿ ಗೋವಿಗೆ ಮಹತ್ವದ ಸ್ಥಾನ ನೀಡಲಾಗಿದೆ.
ಗೋ ಹತ್ಯೆ ಮಹಾಪಾಪ ಎಂದು ತಿಳಿಯಲಾಗಿದೆ. ಯಾವುದೇ ಶುಭಕಾರ್ಯಕ್ಕೆ ಗೋ ಪೂಜೆ ಬಹಳ ಮುಖ್ಯ. ಈ ಹಿನ್ನೆಲೆಯಲ್ಲಿ ಗೋ ಹತ್ಯೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು ಎಂದು ಅವರು ಆಗ್ರಹಿಸಿದರು.
ರಾಷ್ಟ್ರಪಿತ ಮಹತ್ಮಗಾಂಧಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಗೋವಿನ ಬಗ್ಗೆ ಸಾಕಷ್ಟು ಕಾಳಜಿ ಹೊಂದಿದ್ದರು. ಅಲ್ಲದೆ ಮಾಜಿ ಸಚಿವ ಡಾ.ಮಮ್ತಾಜ್ ಆಲಿಖಾನ್ ಅವರು ಮಹಮದೀಯರು ಗೋವಿನ ಬಗ್ಗೆ ಅಪಾರ ಗೌರವ ಇಟ್ಟುಕೊಂಡಿದ್ದು, ಗೋ ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಮಧುರೈನಲ್ಲಿ ಮಹಮದೀಯರು ಗೋ ರಕ್ಷಣೆಗೆ ಹೋರಾಟ ಆರಂಭಿಸಿದ್ದಾರೆ ಎಂದರು.
ಆದ್ದರಿಂದ ಕೂಡಲೇ ರಾಜ್ಯ ಸರ್ಕಾರ ಗೋವುಗಳ ಅಕ್ರಮ ಸಾಗಣೆ ಮತ್ತು ಹತ್ಯೆಯ ಬಗ್ಗೆ ನಿಗಾ ವಹಿಸಬೇಕು. ಅಲ್ಲದೆ ರಾಜ್ಯವನ್ನು ಗೋ ಹತ್ಯೆ ಮುಕ್ತವನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಪಾಂಡುಕುಮಾರ್, ಜಿ.ಆರ್. ಶ್ರೀರಾಮ್, ಟಿ. ರವಿಚಂದ್ರ, ಮಹದೇವ, ಎನ್. ಶಿವಶಂಕರ್, ಚಂದ್ರಶೇಖರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

