ಮೈಸೂರು

ಮಕ್ಕಳ ಮನೋವಿಜ್ಞಾನ ಮುಖ್ಯ

Published On :

ಕ.ಪ್ರ.ವಾರ್ತೆ ಮೈಸೂರು ಜು. 27
ಮಕ್ಕಳ ಮನೋವಿಜ್ಞಾನ ತಿಳಿದುಕೊಳ್ಳುವುದು ಬಹಳ ಮುಖ್ಯವಾಗಿದ್ದು, ಇದರಿಂದ ಅವರ ಹಕ್ಕುಗಳನ್ನು ರಕ್ಷಿಸಲು ಸಹಾಯಕವಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಬಿ. ನಂದಕುಮಾರ್ ಅಭಿಪ್ರಾಯಪಟ್ಟರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಶ್ರೀ ಕಾಗಿನೆಲೆ ಬಿ.ಇಡಿ ಕಾಲೇಜು ಸಂಯುಕ್ತಾಶ್ರಯದಲ್ಲಿ ಶನಿವಾರ ಏರ್ಪಡಿಸಿದ್ದ ಶಿಕ್ಷಕ ಪ್ರಶಿಕ್ಷಣಾರ್ಥಿಗಳಿಗೆ ಬಾಲ ನ್ಯಾಯ ಕಾಯಿದೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರು ಹಾಗೂ ಪೋಷಕರು ಮಕ್ಕಳ ವರ್ತನೆ ಗಮನಿಸಬೇಕು.
ಆಗ ಅವರಲ್ಲಿ ಗೋಚರವಾಗುವ ಸೂಕ್ಷ್ಮ ವರ್ತನೆಯನ್ನು ಗಮನಿಸಬೇಕು. ಒಂದು ವೇಳೆ ನಿರ್ಲಕ್ಷಿಸಿದರೆ ಪ್ರತಿಕೂಲ ಪರಿಣಾಮ ಉಂಟಾಗಿ ಮಕ್ಕಳು ಹಾದಿ ತಪ್ಪುವ ಸಾಧ್ಯತೆ ಇರುತ್ತದೆ ಎಂದರು.
ಶಿಕ್ಷಕರು ಮಕ್ಕಳಿಗೆ ಹೊರೆಯಾಗದಂತೆ ಎಚ್ಚರವಹಿಸಬೇಕು. ದಿನದ ತರಗತಿಗೆ ಎಷ್ಟು ಹೊತ್ತಿಗೆ ಬೇಕೋ ಅಷ್ಟನ್ನು ಮಾತ್ರ ತರಲು ಹೇಳಬೇಕು. ಪೋಷಕರು ಅಷ್ಟೆ, ಮಕ್ಕಳಿಗೆ ಓದುವಂತೆ ಒತ್ತಡ ಹೇರಬಾರದು. ಕಡಿಮೆ ಅಂಕ ಗಳಿಸಿದರೆ ನಿಂದಿಸಬಾರದು. ಎಲ್ಲವನ್ನು ತಾಳ್ಮೆಯಿಂದ ಸ್ವೀಕರಿಸಿ ಅವರು ಯಶಸ್ಸು ಸಾಧಿಸಲು ಸಕರಾತ್ಮಕವಾಗಿ ಉತ್ತೇಜನ ನೀಡಬೇಕು ಎಂದ ಅವರು, ಮಕ್ಕಳು ಗುರು ಹಿರಿಯರ ಮಾತನ್ನು ನಿರ್ಲಕ್ಷಿಸಬಾರದು ಎಂದು ತಿಳಿಸಿದರು.
ಶ್ರೀ ಕಾಗಿನೆಲೆ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಎಂ. ಪುಟ್ಟಬಸವೇಗೌಡ ಅಧ್ಯಕ್ಷತೆ ವಹಿಸಿದ್ದರು. ಬಾಲ ನ್ಯಾಯ ಕಾಯಿದೆ ಬಗ್ಗೆ ಬಾಲ ನ್ಯಾಯ ಮಂಡಳಿ ಸದಸ್ಯ ಪಿ.ಪಿ. ಬಾಬುರಾಜ್ ಉಪನ್ಯಾಸ ನೀಡಿದರು. ಕಾಗಿನೆಲೆ ಬಿ.ಇಡಿ ಕಾಲೇಜು ಪ್ರಾಂಶುಪಾಲೆ ಉಮಾ ರಾಜಶೇಖರ್ ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.