ಪ್ರವಾಸೋದ್ಯಮ ಕ್ಷೇತ್ರಕ್ಕೆ ಒತ್ತಾಯ
ಕ.ಪ್ರ.ವಾರ್ತೆ ಕೆ.ಆರ್. ನಗರ ಜು. 28
ತಾಲೂಕಿನ ಚುಂಚನಕಟ್ಟೆ ಹೋಬಳಿ ಕೇಂದ್ರ ರಾಜ್ಯದ ಪ್ರಮುಖ ಪ್ರವಾಸಿ ತಾಣವಾಗಿದ್ದು, ಸರ್ಕಾರ ಈ ಸ್ಥಳವನ್ನು ಪ್ರವಾಸೋದ್ಯಮ ಕ್ಷೇತ್ರಕ್ಕೆ ಒಳಪಡಿಸಿ ಅಭಿವೃದ್ಧಿಪಡಿಸಬೇಕು ಎಂದು ತಾಲೂಕು ಒಕ್ಕಲಿಗ ಯುವ ವೇದಿಕೆ ಅಧ್ಯಕ್ಷ ಚಿಕ್ಕಹನಸೋಗೆ ಫಾಲಾಕ್ಷ ಒತ್ತಾಯಿಸಿದ್ದಾರೆ.
ಕಾವೇರಿ ಜಲಪಾತ ಮತ್ತು ಕೋದಂಡರಾಮನ ದೇವಾಲಯ ಚುಂಚನಕಟ್ಟೆಯಲ್ಲಿ ಇರುವುದರಿಂದ ನಿತ್ಯ ಸಾವಿರಾರು ಮಂದಿ ಪ್ರವಾಸಿಗರು ಮತ್ತು ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಅವರಿಗೆ ಮೂಲ ಸವಲತ್ತುಗಳು ಲಭಿಸುತ್ತಿಲ್ಲ.
ಬಯಲು ಸೀಮೆಯ ಮೊದಲ ಜಲಪಾತವಾಗಿರುವ ಕಾವೇರಿ ಜಲಪಾತ ಶತಮಾನಗಳ ಇತಿಹಾಸ ಹೊಂದಿದ್ದು, ಸರ್ಕಾರದ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಈ ಬಗ್ಗೆ ಜಿಲ್ಲಾಡಳಿತ ಸಮಗ್ರ ವರದಿ ನೀಡಿ ಕ್ಷೇತ್ರದ ಅಬಿವೃದ್ಧಿಗೆ ಹೆಚ್ಚು ಗಮನ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಜಲಪಾತೋತ್ಸವ ನಡೆಸಿ: ಚುಂಚನಕಟ್ಟೆ ಕಾವೇರಿ ಜಲಪಾತದ ಬಳಿ ಪ್ರವಾಸೋದ್ಯಮ ಇಲಾಖೆ ಜಲಪಾತೋತ್ಸವ ನಡೆಸಿ ಪ್ರವಾಸಿಗರನ್ನು ಆಕರ್ಷಿಸಿ ಶಾಶ್ವತವಾಗಿ ಅಭಿವೃದ್ಧಿ ಕಾರ್ಯ ಕೈಗೊಂಡು ಇಲ್ಲಿಗೆ ಬರುವ ಪ್ರವಾಸಿಗರಿಗೆ ಅನುಕೂಲ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.
ಚುಂಚನಕಟ್ಟೆಗೆ ಸೈಕಲ್ ಸವಾರಿ
ಕ.ಪ್ರ.ವಾರ್ತೆ ಕೆ.ಆರ್. ನಗರ ಜು. 28
ಆಧುನಿಕ ಯುಗದ ಕಾರು, ಮೋಟಾರ್ ಬೈಕುಗಳ ಕಾಲದಲ್ಲಿಯೂ ಸೈಕಲ್ನೊಂದಿಗೆ ವಾರದ ಕೊನೆಯ ದಿನಗಳಲ್ಲಿ ತಪ್ಪದೆ ಸವಾರಿ ಮಾಡುವ ಸ್ನೇಹಿತರು ಪರಿಸರದ ಉಳಿವಿಗೆ ಮುಂದೆ ಬಂದಿದ್ದಾರೆ.
ಮೈಸೂರಿನ ಜಯಲಕ್ಷ್ಮಿಪುರಂ ಉದ್ಯಮಿ ದೀನಾದಗೆಲನ್, ಬಾನುಜೈನ್, ರೂಪೇಶ್ತಂಬಲ್ ಇವರು ಹಲವಾರು ವರ್ಷಗಳಿಂದ ಸೈಕಲ್ ಬಳಸುವ ಹವ್ಯಾಸ ಬೆಳೆಸಿಕೊಂಡಿದ್ದಾರೆ.
ವಾರದಲ್ಲಿ ಮೂರುದಿನ ನಗರದಿಂದ ಚಾಮುಂಡಿ ಬೆಟ್ಟಕ್ಕೆ ಸೈಕಲ್ ಸವಾರಿಯನ್ನು ತಪ್ಪದೆ ಮಾಡುವ ಅಭ್ಯಾಸ ರೂಢಿಸಿಕೊಂಡಿದ್ದಾರೆ.
ಅದರಂತೆ ಭಾನುವಾರದಂದು ಮೈಸೂರಿನಿಂದ ಚುಂಚನಕಟ್ಟೆ ಕಾವೇರಿ ಜಲಪಾತ ವಿಕ್ಷಣೆಗೆ ಸೈಕಲ್ ಸವಾರಿ ಮಾಡಿಕೊಂಡು ಬಂದಿದ್ದಾರೆ. ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಿಗೆ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲದೆ ಹೊರ ಜಿಲ್ಲೆಗಳಿಗೂ ವಾರದ ಕೊನೆಯ ದಿನಗಳಲ್ಲಿ ಬೈಸಿಕಲ್ ಸವಾರಿ ಮಾಡುವ ಇವರು ಸಾರ್ವಜನಿಕರಲ್ಲಿ ಸೈಕಲ್ ಬಳಕೆಯ ಬಗ್ಗೆ ಅರಿವು ಮೂಡಿಸುವುದಾಗಿ ಹೆಮ್ಮೆಯಿಂದ ಕನ್ನಡಪ್ರಭದೊಂದಿಗೆ ಅಭಿಪ್ರಾಯ ಹಂಚಿಕೊಂಡರು.
ಸೈಕಲ್ ಬಳಕೆಯಿಂದ ಪರಿಸರ ಕಲುಷಿತಗೊಳ್ಳುವುದು ಕಡಿಮೆಯಾಗುವುದರ ಜತೆಗೆ ದೈಹಿಕವಾಗಿ ಆರೋಗ್ಯವಂತರಾಗಿ ಇರಬಹುದು. ಸರ್ಕಾರ ನಗರ ಮತ್ತು ಗ್ರಾಮಾಂತರ ಪ್ರದೇಶಗಳ ಪ್ರಮುಖ ರಸ್ತೆಗಳಲ್ಲಿ ಪ್ರತ್ಯೇಕ ಬೈಸಿಕಲ್ ಟ್ರ್ಯಾಕ್ ನಿರ್ಮಾಣ ಮಾಡಬೇಕು ಎಂದು ದೀನಾದಗೆಲನ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

