ಮೈಸೂರು

'ಮಕ್ಕಳು ಮನೆ ಬೆಳಗುವ ನಂದಾದೀಪ'

Published On :

ಕ.ಪ್ರ.ವಾರ್ತೆ ಮೈಸೂರು ಜು. 28
ಮಕ್ಕಳು ಮನೆ ಬೆಳಗುವ ನಂದಾದೀಪವಾದರೆ, ಪೋಷಕರು ಎಣ್ಣೆ ಮತ್ತು ಬತ್ತಿ ದೀಪಗಳಿದ್ದಂತೆ ಎಂದು ಪ್ರೊ. ಕೆ.ಪಿ. ಪುತ್ತೂರಾಯ ಹೇಳಿದರು.
ಆದರ್ಶ ಸೇವಾ ಸಂಘವು ಡಾ. ಮೀರಾ ವಿ. ನಾಥನ್, ಕೆ. ಚಂದ್ರಶೇಖರ್ ಅವರ ಸಹಯೋಗದೊಂದಿಗೆ ನಗರದ ಮಹಾರಾಜ ಕಾಲೇಜು ಶತಮಾನೋತ್ಸವ ಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಭೌತಿಕ, ನೈತಿಕ ಮತ್ತು ಸಂಸ್ಕಾರಯುತವಾಗಿ ಬೆಳವಣಿಗೆ ಸಾಧಿಸಿದರೆ ಬದುಕಿನಲ್ಲಿ ಯಶಸ್ಸು ಗಳಿಸಲು ಸಾಧ್ಯ. ಅವುಗಳನ್ನು ಬೆಳಸಿಕೊಳ್ಳುವಂತೆ ಹಿತವಚನ ನೀಡಿದರು.
ಮೈಸೂರು ವೈದ್ಯಕೀಯ ಕಾಲೇಜಿನ ಡೀನ್ ಡಾ. ಗೀತಾ ಕೆ. ಅವಧಾನಿ ಮಾತನಾಡಿ, ವಿದ್ಯಾರ್ಥಿಗಳಿಗೆ ನಿರ್ದಿಷ್ಟ ಗುರಿ ಇರಬೇಕು. ಆ ಗುರಿ ತಲುಪಲು ಪ್ರಾಮಾಣಿಕ ಪರಿಶ್ರಮ ಇದ್ದಲ್ಲಿ ಯಶಸ್ಸು ನಿಮ್ಮದಾಗುತ್ತದೆ ಎಂದು ಹೇಳಿದರು. ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಎಂಜಿನಿಯರಿಂಗ್, ವೈದ್ಯಕೀಯ, ಡಿಪ್ಲೊಮಾ ಸೇರಿದಂತೆ ವಿವಿಧ ಕೋರ್ಸುಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಡಾ. ಮೀರಾ ವಿ. ನಾಥನ್ ಅತಿಥಿಯಾಗಿ ಭಾಗವಹಿಸಿದ್ದರು. ನಿವೃತ್ತ ಉಪಾಧ್ಯಾಯ ಎಸ್. ಶಂಕರಪ್ಪ ದಂಪತಿಯನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಜಿ.ಆರ್. ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ನಂ. ಶ್ರೀಕಂಠಕುಮಾರ್ ಸ್ವಾಗತಿಸಿದರು. ಖಜಾಂಚಿ ಅನಂತ ನಾರಾಯಣ ವಂದಿಸಿದರು. ರಾ. ರಾಮಕೃಷ್ಣ ನಿರೂಪಿಸಿದರು.

ರಘುಗೆ ಟಿಕೆಟ್ ನೀಡಲು ಆಗ್ರಹ
ಕ.ಪ್ರ.ವಾರ್ತೆ ಮೈಸೂರು ಜು. 28
ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್. ರಘು ಅವರಿಗೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ ಟಿಕೆಟ್ ನೀಡುವಂತೆ ಕಾಯಕ ಸಮಾಜಗಳ ಒಕ್ಕೂಟ ಆಗ್ರಹಿಸಿದೆ.ಸುಮಾರು 25 ವರ್ಷಗಳಿಂದಲೂ ಆರ್. ರಘು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಇತರೆ ಹಿಂದುಳಿದ ವರ್ಗಗಳನ್ನು ಒಂದುಗೂಡಿಸಿ ಕಾಂಗ್ರೆಸ್ ಪಕ್ಷದ ಗೆಲವಿಗೆ ಶ್ರಮಿಸಿದ್ದಾರೆ. ಸದ್ಯ ಕೆಪಿಸಿಸಿ ಸದಸ್ಯರಾಗಿರುವ ಅವರಿಗೆ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಿಕೆಟ್ ನೀಡಬೇಕಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಸತ್ಯನಾರಾಯಣ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು. ಮುಖಂಡರಾದ ಎಂ. ಕೃಷ್ಣ, ಕೆ. ನಾರಾಯಣ, ಮಹದೇವಣ್ಣ, ಎಂ.ವಿ. ರಾಚಪ್ಪ, ಪುಟ್ಟಸ್ವಾಮಿ ನಾಯಕ, ನರಸಿಂಹ ಇದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.