ಪತ್ರಿಕಾರಂಗ ಜವಾಬ್ದಾರಿ ಹೆಚ್ಚಿಸಿಕೊಳ್ಳಲಿ: ಜಿಟಿಡಿ
ಕ.ಪ್ರ.ವಾರ್ತೆ ಮೈಸೂರು ಜು. 29
ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ವ್ಯವಸ್ಥೆಗಳ ಪಾವಿತ್ರತೆ ಕಾಪಾಡುವಲ್ಲಿ ಪತ್ರಿಕಾರಂಗ ಮತ್ತಷ್ಟು ಪರಿಣಾಮಕಾರಿಯಾಗಿ ಜವಾಬ್ದಾರಿ ವಹಿಸಬೇಕು ಎಂದು ಶಾಸಕ ಜಿ.ಟಿ. ದೇವೇಗೌಡ ಹೇಳಿದರು. ಕನ್ನಡಿಗರ ಭುವನ ಸಂಗಾತಿ ಪತ್ರಿಕೆಯ 14ನೇ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲಿನ ಎಲ್ಲಾ ರಂಗಗಳು ಬೇಸರವಾಗುವಷ್ಟರ ಮಟ್ಟಿಗೆ ಕಲುಷಿತಗೊಂಡಿವೆ. ಒಳ್ಳೆ ವ್ಯಕ್ತಿತ್ವ, ಸಂಗತಿಗಳು ಹಾಗೂ ವಿಚಾರಧಾರೆಯನ್ನು ಹುಡುಕುವಂತಹ ಬೆಳವಣಿಗೆಗಳಾಗುತ್ತಿವೆ. ಜತೆಗೆ ವ್ಯವಸ್ಥೆಗಳು ಆತಂಕಕಾರಿಯಾಗಿ ಕಲುಷಿತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉತ್ತಮ ಸಮಾಜ ನಿರ್ಮಿಸುವಲ್ಲಿ ಮಾಧ್ಯಮಗಳು ಮುಂದಾಗಬೇಕು ಎಂದರು. ಮುಖ್ಯ ಅತಿಥಿಯಾಗಿ ವಿಧಾನ ಪರಿಷತ್ ಸದಸ್ಯ ಡಿ.ಎಸ್. ವೀರಯ್ಯ ಮಾತನಾಡಿದರು. ಕರ್ನಾಟಕ ರಾಜ್ಯ ಮುಕ್ತ ವಿವಿಯ ಕುಲಪತಿ ಪ್ರೊ.ಎಂ.ಜಿ. ಕೃಷ್ಣನ್, ಡೀಡ್ ಸಂಸ್ಥೆ ನಿರ್ದೇಶಕ ಎಸ್. ಶ್ರೀಕಾಂತ್, ದಲಿತ ಮುಖಂಡ ಹರಿಹರ ಆನಂದಸ್ವಾಮಿ, ಕನ್ನಡ ಚಳವಳಿಗಾರ ಮೂಗೂರು ನಂಜುಂಡಸ್ವಾಮಿ, ಒಣಭೂಮಿ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಕೆ.ಆರ್. ಮೋಹನ್ ಕುಮಾರ್ ಹಾಗೂ ಪ್ರೊ.ಡಿ.ಆನಂದ್ ಅತಿಥಿಯಾಗಿದ್ದರು.
ರೆವಿನ್ಯೂ ಬಡಾವಣೆ ಸಕ್ರಮ: ಆ.8ರಂದು ಪ್ರತಿಭಟನೆ
ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯೊಳಗೆ ನಗರದ ರೆವಿನ್ಯೂ ಬಡಾವಣೆಗಳನ್ನು ಸಕ್ರಮಗೊಳಿಸಲು ಆಗ್ರಹಿಸಿ ಆ.8ರ ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಸರ್ವಜನಾಂಗ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ವೇಣುಗೋಪಾಲ್ ಹೇಳಿದರು. ನಗರದಲ್ಲಿ 4 ಲಕ್ಷ ಕಂದಾಯ ನಿವೇಶನಗಳಿದ್ದು, ಇದರ ಬಗ್ಗೆ ಜನಪ್ರತಿನಿಧಿಗಳು ಯಾರೂ ಮಾತನಾಡುತ್ತಿಲ್ಲ. ರಾಜ್ಯ ಸರ್ಕಾರವು ನಗರ ರೆವಿನ್ಯೂ ಬಡಾವಣೆಗಳನ್ನು ಸಕ್ರಮಗೊಳಿಸಲು ಮುಂದಾಗಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಪದಾಧಿಕಾರಿಗಳಾದ ಮಹದೇವಪ್ಪ ಉಡಿಗಾಲ, ಗಂಗಾಧರಸ್ವಾಮಿ, ಆರ್. ಲಕ್ಷ್ಮಣ್ರಾವ್, ಮೂರ್ತಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

