ಗ್ರಾ.ಪಂ. ಕಾರ್ಯದರ್ಶಿಗೆ 2 ವರ್ಷ ಕಠಿಣ ಸಜೆ, ದಂಡ
ಕ.ಪ್ರ.ವಾರ್ತೆ , ಬೆಂಗಳೂರು , ಜು. 30
ಚರಂಡಿ ಕಾಮಗಾರಿಗೆ ಹಣ ಬಿಡುಗಡೆ ಮಾಡಲು ಲಂಚ ಪಡೆದ ಗ್ರಾಮ ಪಂಚಾಯತಿ ಕಾರ್ಯದರ್ಶಿಗೆ ಮೈಸೂರು ಜಿಲ್ಲಾ ವಿಶೇಷ ನ್ಯಾಯಾಲಯ 2 ವರ್ಷ ಕಠಿಣ ಸಜೆ ಹಾಗೂ ರು. 25 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಬೆನಕನಹಳ್ಳಿ ಗ್ರಾಮ ಪಂಚಾಯತಿ ಕಾರ್ಯದರ್ಶಿ ಎಂ.ಶಿವಸ್ವಾಮಿ ಶಿಕ್ಷೆಗೆ ಗುರಿಯಾದವರು.
2009ರ ಆಗಸ್ಟ್ ತಿಂಗಳಲ್ಲಿ ಮೈಸೂರು ಹೆಮ್ಮಿಗೆ ಗ್ರಾಮ ಪಂಚಾಯಿತಿಯ ಚಂದಹಳ್ಳಿ ಗ್ರಾಮದಲ್ಲಿ ಬಾಕ್ಸ್ ಮಾದರಿಯಲ್ಲಿ ಚರಂಡಿ ನಿರ್ಮಾಣ ಕಾಮಗಾರಿ ಸಂಬಂಧ ಗುತ್ತಿಗೆದಾರ ವೈ.ಜಿ.ಚಂದ್ರಶೇಖರ್ ಎಂಬುವವರಿಗೆ ರು. 2.61 ಲಕ್ಷದ ಚೆಕ್ ವಿತರಿಸಲು ಎಂ.ಶಿವಸ್ವಾಮಿ ರು. 51,500 ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
2009ರ ಆಗಸ್ಟ್ 4 ರಂದು ಲಂಚ ಸ್ವೀಕರಿಸುತ್ತಿದ್ದಾಗ ಶಿವಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಮೈಸೂರು 3ನೇ ಅಪರ ಜಿಲ್ಲಾ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ನಾಲ್ಕು ವರ್ಷಗಳ ವಿಚಾರಣೆ ಬಳಿಕ ತೀರ್ಪು ಹೊರ ಬಂದಿದೆ.
ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ ಕಲಂ 7ರ ಅನ್ವಯ ಶಿವಸ್ವಾಮಿಗೆ 1 ವರ್ಷ ಕಠಿಣ ಸಜೆ ಹಾಗೂ ರು. 10 ಸಾವಿರ ದಂಡ ಹಾಗೂ ಕಲಂ 13(2)ರ ಅನ್ವಯ ಎರಡು ವರ್ಷ ಕಠಿಣ ಸಜೆ ಹಾಗೂ ರು. 15 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಎರಡು ಶಿಕ್ಷೆಗಳು ಏಕ ಕಾಲದಲ್ಲಿ ಜಾರಿಯಾಗುತ್ತವೆ. ಪ್ರಕರಣದ ಎರಡನೇ ಆರೋಪಿ ಕಿರಿಯ ಎಂಜಿನಿಯರ್ ಎನ್.ಟಿ.ನಾಗರಾಜ್ ಅವರ ವಿರುದ್ಧ ಆರೋಪ ಸಾಭೀತಾಗದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯ ಬಿಡುಗಡೆಗೊಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

