ಮೈಸೂರು

12 ಕೋಟಿ ಸಾಲ ಮನ್ನಾ

Published On :

ಕೆ.ಆರ್. ನಗರ: ಎಂಸಿಡಿಸಿಸಿ ಬ್ಯಾಂಕ್ ವತಿಯಿಂದ ತಾಲೂಕಿನ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಪ್ರಸುತ್ತ ಸಾಲಿನಲ್ಲಿ ರೈತರಿಗೆ 25 ಕೋಟಿ ಕೃಷಿ ಸಾಲ ನೀಡಲಾಗಿದ್ದು, ಈ ಪೈಕಿ ಸಾಲ ಮನ್ನಾ ಯೋಜನೆಯಡಿ 12 ಕೋಟಿ ಸಾಲ ಮನ್ನಾ ಆಗಿದೆ ಎಂದು ಜಿಲ್ಲಾ ಸಹಕಾರ ಬ್ಯಾಂಕಿನ ಉಪಾಧ್ಯಕ್ಷ ಎಸ್. ಸಿದ್ದೇಗೌಡ ಹೇಳಿದರು.
ತಾಲೂಕಿನ ತಿಪ್ಪೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಬೆಳೆ ಸಾಲದ ಚೆಕ್ ವಿತರಿಸಿ ಮಾತನಾಡಿ, ಈ ಬಾರಿಯು 13 ಕೋಟಿ ಸಾಲ ವಿತರಿಸಿದ್ದು. 30 ಕೋಟಿ ಕೃಷಿ ಸಾಲ ನೀಡುವ ಗುರಿ ಹೊಂದಿರುವುದರಿಂದ ರೈತರು ಇದರ ಸದುಪಯೋಗ ಪಡೆಯಬೇಕು ಎಂದರು.
ಸರ್ಕಾರದ ಆದೇಶದಂತೆ 2 ಲಕ್ಷವರೆಗೆ ಬಡ್ಡಿರಹಿತ ಸಾಲ ನೀಡುವುದಲ್ಲದೆ, ಒಂದು ಎಕರೆ ಬತ್ತದ ಬೆಳೆಗೆ 15 ಸಾವಿರ, ಅರಿಶಿನ, ಬಾಳೆ ಮತ್ತು ಕಬ್ಬು ಬೆಳೆಗೆ 35 ಸಾವಿರ, ತಂಬಾಕು ಒಂದು ಬ್ಯಾರೆನ್‌ಗೆ 50 ರಿಂದ 75 ಸಾವಿರದವರೆಗೆ ಸಾಲ ನೀಡಲಾಗುವುದು. ರೈತರು ಸಹಕಾರ ಸಂಘಗಳಲ್ಲಿ ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮೂಲಕ ಸಂಘದ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಸಂಘದ ಅಧ್ಯಕ್ಷ ಚಿಕ್ಕರಾಮನಾಯಕ, ನಿರ್ದೇಶಕ ಟಿ.ಎಲ್. ಪರಶಿವಮೂರ್ತಿ, ಕೆ.ಆರ್. ರಮೇಶ್, ಟಿ. ರಾಜೇಗೌಡ, ತಾಪಂ ಮಾಜಿ ಅಧ್ಯಕ್ಷ ಡಿ. ಧರಣೇಂದ್ರ, ಮಹದೇವ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.