ಮೈಸೂರು

ಇಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

Published On :

ಕ.ಪ್ರ.ವಾರ್ತೆ , ಕೆ.ಆರ್. ನಗರ , ಜು. 31
ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಆ.1 ರಂದು ಚುನಾವಣೆ ನಡೆಯಲಿದ್ದು, ಹಾಲಿ ಅಧ್ಯಕ್ಷ ಡಿಂಡಿಮ ಶಂಕರ್ ಮತ್ತು ಉಪ ತಹಸೀಲ್ದಾರ್ ಎಂ.ಎಸ್. ಯದುಗಿರೀಶ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ಕಳೆದ ಜು. 22ರಂದು ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದವರೂ ಸೇರಿದಂತೆ ಒಟ್ಟು 34 ಮಂದಿ ನಿರ್ದೇಶಕರಿದ್ದಾರೆ. ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಎಂ.ಎಸ್. ಯದುಗಿರೀಶ್ ಪರವಾಗಿ 24 ಮಂದಿ ನಿರ್ದೇಶಕರು ಬೆಂಬಲ ವ್ಯಕ್ತಪಡಿಸಿದ್ದಾರೆ ಎಂಬ ಭರವಸೆ ಹಿನ್ನೆಲೆಯಲ್ಲಿ ಅವರೇ ಆಯ್ಕೆಯಾಗುತ್ತಾರೆ ಎಂಬ ಮಾತು ಕೇಳಿಬಂದಿತ್ತು. ಈ ಮಧ್ಯೆ ಡಿಂಡಿಮ ಶಂಕರ್ ಸಹ ತೆರೆಮರೆಯಲ್ಲಿ ಭಾರಿ ಕಸರತ್ತು ನಡೆಸುತ್ತಿದ್ದು, ಶತಾಯ- ಗತಾಯ ಅಧ್ಯಕ್ಷ ಪದವಿ ಉಳಿಸಿಕೊಳ್ಳಲು ರಾಜಕೀಯ ತಂತ್ರ ಬಳಸುತ್ತಿದ್ದರೆ ಎನ್ನಲಾಗಿದೆ.
ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯ ನಂತರ ಶಾಸಕ ಸಾ.ರಾ. ಮಹೇಶ್ ಎರಡು ಗುಂಪಿನವರಿಗೂ ನಾನು ಯಾವುದೇ ಕಾರಣಕ್ಕೂ ಮಧ್ಯಪ್ರವೇಶ ಮಾಡುವುದಿಲ್ಲ. ಯಾರಿಗೆ ಬೆಂಬಲವಿದೆಯೋ ಅವರು ಆಯ್ಕೆಯಾಗಲಿ ಎಂದು ಹೇಳಿದ್ದರಿಂದ ಯದುಗಿರೀಶ್ ಅಧ್ಯಕ್ಷರಾಗುವುದು ಖಚಿತ ಎಂದು ಎಲ್ಲರು ನಂಬಿದ್ದರು.
ಕಳೆದ ಎರಡು ದಿನಗಳಿಂದ ಶಾಸಕರು ಯು ಟರ್ನ್ ಪಡೆದುಕೊಂಡಿದ್ದು, ಡಿಂಡಿಮ ಶಂಕರ್ ಪರವಾಗಿ ಮತ ಚಲಾಯಿಸುವಂತೆ ನಿರ್ದೇಶಕರಿಗೆ ದೂರವಾಣಿ ಮೂಲಕ ಸೂಚಿಸುತ್ತಿದ್ದು, ಇದರಿಂದ ಹಲವು ನಿರ್ದೇಶಕರು ವಿಚಲಿತರಾಗಿದ್ದಾರಲ್ಲದೆ, ಇಕ್ಕಟ್ಟಿಗೆ ಸಿಲುಕಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.