ಮೈಸೂರು

ರೋಗ ತಡೆಗೆ ಜಾಗೃತಿ ಮೂಡಿಸಿ: ಹೇಮಂತ್

Published On :

ಕ.ಪ್ರ.ವಾರ್ತೆ , ಟಿ.ನರಸೀಪುರ , ಜು. 31
ಎಚ್‌ಐವಿ ಸೋಂಕಿನ ಬಗ್ಗೆ ವಿದ್ಯಾರ್ಥಿಗಳು ಮಾಹಿತಿ ಪಡೆದುಕೊಂಡು ರೋಗವನ್ನು ತಡೆಗಟ್ಟುವ ಬಗ್ಗೆ ಅನ್ಯರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಲಕಾಡು ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚನಾ ಸಲಹೆಗಾರ ಹೇಮಂತ್ ಹೇಳಿದರು.
ತಾಲೂಕಿನ ತಲಕಾಡು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮೃದ್ಧಿ ಸಾಮಾಜಿಕ ಸೇವಾ ಸಂಸ್ಥೆ ಆಯೋಜಿಸಿದ್ದ ಎಚ್‌ಐವಿ ಜಾಗೃತಿ ಜಾಥಾ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿ, ಎಚ್‌ಐವಿ ಸೋಂಕಿನ ಬಗ್ಗೆ ಅನೇಕ ತಪ್ಪು ತಿಳಿವಳಿಕೆಗಳು ಇನ್ನೂ ಜೀವಂತವಾಗಿವೆ. ಸೋಂಕು ಹರಡುವ ಪ್ರಮುಖ ಕಾರಣ ಅರಿಯಬೇಕು ಎಂದರು.  
ಬೆಂಗಳೂರಿನ ಸಮೃದ್ಧಿ ಸಾಮಾಜಿಕ ಸೇವಾ ಸಂಸ್ಥೆಯ ಅಧ್ಯಕ್ಷ ಎಸ್. ರಂಗಯ್ಯ ಮಾತನಾಡಿ, ಎಚ್‌ಐವಿ ಸೋಂಕು ತಗುಲದಂತೆ ಮುನ್ನೆಚ್ಚರಿಕೆಯ ಬಗ್ಗೆ ಕಲಿಕಾ ಹಂತದಲ್ಲಿಯೇ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಆರೋಗ್ಯದ ಅರಿವಿನಿಂದ ವಿದ್ಯಾರ್ಥಿಗಳು ಬೇರೆಯವರಲ್ಲೂ ಜಾಗೃತಿ ಮೂಡಿಸಲು ಸಹಕಾರವಾಗುತ್ತದೆ. ಅದಕ್ಕಾಗಿಯೇ ಜಾಗೃತಿ ಕಾರ್ಯಕ್ರಮ  ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಶಾಲೆಯ ವಿದ್ಯಾರ್ಥಿಗಳು ತಲಕಾಡು ಗ್ರಾಮದ ಪ್ರಮುಖ ಬೀದಿಗಳಲ್ಲಿ ಎಚ್‌ಐವಿ ಜಾಗೃತಿ ಜಾಥಾ ನಡೆಸಿದರು.
ಶಾಲೆಯ ಉಪಪ್ರಾಂಶುಪಾಲ ಜಿ.ನಂಜುಂಡಸ್ವಾಮಿ, ಪತ್ರಕರ್ತ ಎಂ.ಮಹದೇವ, ಗ್ರಾಪಂ ಮಾಜಿ ಅಧ್ಯಕ್ಷ ಎಸ್. ಮಲ್ಲಣ್ಣಿ, ಸಾಮಾಜಿಕ ಸೇವಾ ಸಂಸ್ಥೆಯ ಕಾರ್ಯದರ್ಶಿ ಜಯರಾಂ, ನಿರ್ದೇಶಕ ಕ್ಯಾತನಹಳ್ಳಿ ಮಹೇಶ್, ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಶಿವಕುಮಾರ್, ಶಿಕ್ಷಕರಾದ ಜಗದೀಶ್, ರಂಗೇಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.