ಮೈಸೂರು

ಎನ್ಟಿಎಂಎಸ್ ಶಾಲಾ ಮಕ್ಕಳಿಗೆ ಸಿಹಿ ವಿತರಣೆ

Published On :

ಕ.ಪ್ರ.ವಾರ್ತೆ   ಮೈಸೂರು   ಜೂ. 3
ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಮಹಾರಾಣಿ ಎನ್ಟಿಎಂಎಸ್ ಶಾಲೆಯ ಮಕ್ಕಳಿಗೆ ಸಂಸದ ಎಚ್. ವಿಶ್ವನಾಥ್ ಅವರು ಸಿಹಿ ವಿತರಿಸುವ ಮೂಲಕ ಸೋಮವಾರ ಸ್ವಾಗತಿಸಿದರು.
ಈ ಶಾಲೆಯನ್ನು ಮುಚ್ಚುವ ಹುನ್ನಾರ ನಡೆಯುತ್ತಿರುವ ಸಂದರ್ಭದಲ್ಲಿ ಮೈಸೂರು ಕನ್ನಡ ವೇದಿಕೆಯವರು ಮಕ್ಕಳಿಗೆ ಸಿಹಿ ವಿತರಣೆ ಕಾರ್ಯಕ್ರಮ ಕಾರ್ಯಕ್ರಮ ಆಯೋಜಿಸಿದ್ದರು.
ಈ ವೇಳೆ ಮಾತನಾಡಿದ ಸಂಸದ ವಿಶ್ವನಾಥ್, ಹಳೆಯಾದಾದ ಈ ಶಾಲೆಯನ್ನು ಉಳಿಸುವ ಜವಾಬ್ದಾರಿ ಕನ್ನಡಪರ ಸಂಘಟನೆಗಳಿಗೆ ಮಾತ್ರವಲ್ಲದೆ ಸರ್ಕಾರ ಮತ್ತು ಅಧಿಕಾರಿಗಳ ಮೇಲೂ ಇದೆ. ನಾನು ಸಹ ಕನ್ನಡಪರ ಹೋರಾಟಗಾರನಾಗಿ ರಾಜಕೀಯಕ್ಕೆ ಬಂದಿದ್ದೇನೆ ಎಂದರು.
ಕೆಲವು ಸಾಹಿತಿಗಳು ವೇದಿಕೆಗಳಲ್ಲಿ ಕನ್ನಡಪರ ಮಾತನಾಡುತ್ತಾರೆ. ಆದರೆ, ಅವರ ಮಕ್ಕಳನ್ನು ಇಂಗ್ಲಿಷ್ ಮಾಧ್ಯಮದಲ್ಲಿ ವ್ಯಾಸಂಗ ಮಾಡಿಸುತ್ತಿರುವುದು ಎಲ್ಲರಿಗೂ ಗೊತ್ತಿದೆ. ಕೇವಲ ಮಾತನಾಡುವುದನ್ನು ಬಿಟ್ಟು, ಮನೆ- ಮನೆಗೆ ತೆರಳಿ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಲು ಭರವಸೆ ಮೂಡಿಸಬೇಕು. ಆಗ ಮಾತ್ರ ಕನ್ನಡ ಶಾಲೆಗಳು ಉಳಿಯಲು ಸಾಧ್ಯ ಎಂದು ಸಲಹೆ ನೀಡಿದರು.
ವೇದಿಕೆಯ ಅಧ್ಯಕ್ಷ ಎಸ್. ಬಾಲಕೃಷ್ಣ, ಮುಖಂಡರಾದ ನಾಲಾಬೀದಿ ರವಿ, ಸುರೇಶ್ಬಾಬು, ಭಾನುಮೋಹನ್, ಕಾಂಗ್ರೆಸ್ ಮುಖಂಡರಾದ ಪಿ. ರಾಜು, ಶೌಕತ್ ಅಲಿಖಾನ್, ಕೆ.ಎಸ್. ಶಿವರಾಮು, ಮುಖ್ಯ ಶಿಕ್ಷಕ ನಾಗರಾಜು, ಶಿಕ್ಷಕಿ ಲಕ್ಷ್ಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.