ಡೆಂಘೀ ತಡೆಗೆ ಶ್ರಮಿಸಿ: ಡಿಎಚ್ಒ ಸೂಚನೆ
ಟಿ. ನರಸೀಪುರ: ಜಿಲ್ಲೆಯಲ್ಲಿ ಡೆಂಘೀ ಜ್ವರ ವ್ಯಾಪಕಗೊಳ್ಳಲು ಆರೋಗ್ಯ ಇಲಾಖೆಯ ವೈಫಲ್ಯವನ್ನೆ ಹೊಣೆಯನ್ನಾಗಿ ಮಾಡುತ್ತಿರುವುದರಿಂದ ಸರ್ಕಾರಿ ವೈದ್ಯರು ಹಾಗೂ ಸಿಬ್ಬಂದಿ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಾಲೇಗೌಡ ಹೇಳಿದರು.
ಇಲ್ಲಿನ ತಾಲೂಕು ಆರೋಗ್ಯಾಧಿಕಾರಿಗಳ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ವೈದ್ಯರು ಹಾಗೂ ಸಿಬ್ಬಂದಿಗಳ ಸಭೆಯಲ್ಲಿ ಮಾತನಾಡಿ, ಡೆಂಘೀ ಜ್ವರದಿಂದಾಗಿ ಜಿಲ್ಲೆಯೆ ಹೊತ್ತಿ ಉರಿಯುತ್ತಿರುವುದಕ್ಕೆ ರಾಜ್ಯ ಸರ್ಕಾರ ತಮ್ಮನ್ನೇ ನೇರ ಹೊಣೆಗಾರರನ್ನಾಗಿ ಮಾಡಿದೆ. ಇಂತಹ ಘಟನೆ ಆರೋಗ್ಯ ಇಲಾಖೆಗೆ ಸವಾಲಾಗಿರುವುದರಿಂದ ನಾವೆಲ್ಲರೂ ಹೆಚ್ಚು ಶ್ರಮವಹಿಸಿ ದುಡಿಯಬೇಕು ಎಂದರು.
ಮುಖ್ಯಮಂತ್ರಿ ತವರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯ ಕರ್ತವ್ಯ ಲೋಪವಾಗಬಾರದು ಎಂದು ತಮ್ಮ ಇಲಾಖೆಯ ವೈದ್ಯರು ಮತ್ತು ಸಿಬ್ಬಂದಿಗೆ ಸೂಚಿಸಿದರು. ಸ್ಪಷ್ಟ ಮಾಹಿತಿ ನೀಡದ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡು, ಕರ್ತವ್ಯ ನಿರ್ವಹಣೆಯ ಬಗ್ಗೆಯೂ ತಾಕೀತು ಮಾಡಿದರು. ಡೆಂಘೀಯಿಂದ ಸಾಮಾನ್ಯ ಜನರ ಜೀವಕ್ಕೆ ಆಪತ್ತು ಇರುವ ಸಂದರ್ಭದಲ್ಲಿ ಕರ್ತವ್ಯ ಪ್ರಜ್ಞೆ ಮೆರೆಯಬೇಕೆಂದು ಸಲಹೆ ನೀಡಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಎಲ್. ಶ್ರೀನಿವಾಸ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಗೋವಿಂದಶೆಟ್ಟಿ, ಆರೋಗ್ಯ ಶಿಕ್ಷಣಾಧಿಕಾರಿ ರಾಜಣ್ಣ, ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಎಸ್.ಸಿ. ಮಹದೇವಸ್ವಾಮಿ, ಡಾ. ಶೋಭರಾಣಿ, ಡಾ. ಮಂಜುಳಾ, ಡಾ. ನಟರಾಜು, ಡಾ. ಚಂದ್ರಶೇಖರ್, ಹಿರಿಯ ಆರೋಗ್ಯ ಸಹಾಯಕ ಮಹದೇವಯ್ಯ, ಶಂಕರೇಗೌಡ, ನಾಗೇಶ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

