ವಿದ್ಯುನ್ಮಾನ ಬ್ಯಾಂಕಿಂಗ್ ಬಳಕೆ ಅರಿವು ಅಗತ್ಯ
ಕ.ಪ್ರ.ವಾರ್ತೆ ಮೈಸೂರು ಜೂ. 4
ವಿದ್ಯುನ್ಮಾನ ಬ್ಯಾಂಕಿಂಗ್ ಬಳಕೆ ಸಂಬಂಧ ಬ್ಯಾಂಕ್ಗಳು ಗ್ರಾಹಕರಲ್ಲಿ ಅರಿವು ಮೂಡಿಸಬೇಕಿದೆ ಎಂದು ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಎಸ್. ಸುಧಾಕರ ಶೆಟ್ಟಿ ಅಭಿಪ್ರಾಯಪಟ್ಟರು.
ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಮಂಗಳವಾರ ಏರ್ಪಡಿಸಿದ್ದ ವಿದ್ಯುನ್ಮಾನ ಬ್ಯಾಂಕಿಂಗ್ ಬಳಕೆ ಪ್ರಮಾಣ ಪತ್ರ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
ವಿದ್ಯುನ್ಮಾನ ಬ್ಯಾಂಕಿಂಗ್ ಬಳಕೆ ಬಹು ಉಪಯೋಗಿಯಾಗಿದೆ. ಆದರೆ, ಭಾರತದಲ್ಲಿ ಯಾವುದೇ ಹೊಸ ಯೋಜನೆಯನ್ನು ಗ್ರಾಹಕರು ಬಹುಬೇಗ ಸ್ವೀಕರಿಸುವುದಿಲ್ಲ. ಆದ್ದರಿಂದ ಬ್ಯಾಂಕ್ಗಳು ಗ್ರಾಹಕರಲ್ಲಿ ಅರಿವು ಮೂಡಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.
ಈ ವ್ಯವಸ್ಥೆಯ ಬಳಕೆಯಿಂದ ವ್ಯಾಪಾರಿಗಳಿಗೆ ವ್ಯವಹಾರ ಸುಲಭವಾಗುತ್ತದೆ ಎಂದ ಅವರು, ವಿದ್ಯುನ್ಮಾನ ಬ್ಯಾಂಕಿಂಗ್ ವ್ಯವಸ್ಥೆ ಕಾರ್ಯನಿರ್ವಹಿಸುವ ವಿಧಾನದ ಬಗ್ಗೆ ಮಾಹಿತಿ ನೀಡಿದರು.
ಬಳಿಕ ವಿದೇಶಿ ವ್ಯಾಪಾರದ ಸಹಾಯಕ ಪ್ರಧಾನ ನಿರ್ದೇಶಕ ಪಿ.ಆರ್. ಮಧುಸೂದನ್, ವಿದೇಶಿ ವ್ಯಾಪಾರ ನೀತಿ ಕುರಿತು ವಿವರಿಸಿದರು. ವಿದ್ಯುನ್ಮಾನ ಬ್ಯಾಂಕಿಂಗ್ ಸೌಲಭ್ಯ ಪಡೆಯುವ ವಿಧಾನ ಕುರಿತು ಇಂಟಲ್ ಬ್ಯಾಂಕ್ನ ಮುಖ್ಯ ವ್ಯವಸ್ಥಾಪಕ ಚೌಡಯ್ಯ ವಿವರಿಸಿದರು. ಭಾರತೀಯ ರಫ್ತು ಸಂಘಟನೆಯ ಜಂಟಿ ಉಪ ಪ್ರಧಾನ ನಿರ್ದೇಶಕ ಆರ್. ಅಶೋಕನ್, ವಿಐಟಿಸಿಯ ಉಪ ನಿರ್ದೇಶಕ ಎಂ.ಎನ್. ಮುರ್ಲೇಶ್, ವಿಜಯ ಬ್ಯಾಂಕ್ನ ಸಹಾಯಕ ಪ್ರಧಾನ ವ್ಯವಸ್ಥಾಪಕ ಕೆ. ಸುರೇಂದ್ರ ಹೆಗ್ಡೆ, ಸಂಘದ ಉಪಾಧ್ಯಕ್ಷ ಎ.ಎಸ್. ಸತೀಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

