ಮೈಸೂರು

ಅಲೆಮಾರಿ ಜನರ ಅಭಿವೃದ್ಧಿಗೆ ಪ್ರತ್ಯೇಕ ಇಲಾಖೆಗೆ ಆಗ್ರಹ

Published On :

ಕ.ಪ್ರ.ವಾರ್ತೆ ,   ಮೈಸೂರು ,   ಜೂ. 5
ಅಲೆಮಾರಿ ಜನರ ಸಮಗ್ರ ಅಭಿವೃದ್ಧಿಗೆ  ಪ್ರತ್ಯೇಕ ಇಲಾಖೆ ತೆರೆಯುವಂತೆ ಅಖಿಲ ಕರ್ನಾಟಕ ಗೋಂಧಳಿ ಸಮಾಜ ಸಂಘ ಮತ್ತು ಸಲಹಾ ಸಮಿತಿ ಅಧ್ಯಕ್ಷ ಕೆ.ಎಂ. ಜಯರಾಮಯ್ಯ ಮುಖ್ಯಮಂತ್ರಿಯನ್ನು ಆಗ್ರಹಿಸಿದ್ದಾರೆ.
ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಲ್ಲಿ ನೀಡುವ ವ್ಯಾಪಾರ ಸಾಲ, ಕಿರುಸಾಲ, ಕೊಳವೆ ಬಾವಿ ಮತ್ತು ವಿದ್ಯಾಭ್ಯಾಸ ಮುಂತಾದ ಸಾಲ ನೀಡುವಾಗ ಅಲೆಮಾರಿ ಜನಾಂಗಕ್ಕೆ ವಿಶೇಷ ರೀತಿಯಲ್ಲಿ ಪರಿಗಣಿಸಬೇಕು. ಈ ಕಾರಣಕ್ಕಾಗಿ ಅಲೆಮಾರಿಗಳ ಜನರ ಸಂಪೂರ್ಣ ಅಭಿವೃದ್ಧಿಗೆ ಪ್ರತ್ಯೇಕ ಇಲಾಖೆ ತೆರೆಯುವುದು ಸೂಕ್ತ ಎಂದು ಹೇಳಿದ್ದಾರೆ.
ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧಿಕಾರಿಗಳು ಅನೇಕ ಜಿಲ್ಲೆಗಳಲ್ಲಿ ಅಲೆಮಾರಿ ಜಾತಿಯವರಿಗೆ ಚೆಕ್ ನೀಡುವಾಗ ಹಲವಾರು ಬಾರಿ ಅಲೆಸುತ್ತಿದ್ದು, ಇದನ್ನು ತಪ್ಪಿಸಲು ಸಾಲದ ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡುವ ವ್ಯವಸ್ಥೆ ಕಲ್ಪಿಸಬೇಕು ಎಂದು ಕೋರಿದ್ದಾರೆ.
ಭೂಮಿ ಇಲ್ಲದ ಈ ಸಮುದಾಯದವರಿಗೆ ಭೂಮಿ ಪಡೆಯುವುದು ಅತ್ಯಂತ ಪ್ರಯಾಸದ ಕೆಲಸ. ಆದ್ದರಿಂದ ಸೂಕ್ತ ಬದಲಿ ವ್ಯವಸ್ಥೆ ಮೂಲಕ ಅಲೆಮಾರಿ ಜಾತಿಯವರಿಗೆ ಭೂಮಿ ನೀಡಬೇಕು, ಯಾವುದೇ ಶಾಲಾ- ಕಾಲೇಜುಗಳಲ್ಲಿ ಲಿಖಿತ ಪರೀಕ್ಷೆ ಇಲ್ಲದೆ ಪ್ರವೇಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.