ಸಿಎಂ ಸಿದ್ದರಾಮಯ್ಯ, ಎಚ್ಡಿಕೆಗೆ ಸನ್ಮಾನ
ಕ.ಪ್ರ.ವಾರ್ತೆ , ಮೈಸೂರು , ಜೂ. 5
ಮೈಸೂರು ಜಿಲ್ಲಾ ಪಂಚಾಯಿತಿ ಕಾಂಗ್ರೆಸ್ ಸದಸ್ಯರು ಪ್ರತಿಪಕ್ಷ ನಾಯಕ ಕೆ. ಮಾರುತಿ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಸನ್ಮಾನಿಸಿದರು.
ಇದೇ ವೇಳೆ ಮೈಸೂರು ಜಿಪಂಗೆ ಹೆಚ್ಚಿನ ಅನುದಾನ ನೀಡುವಂತೆ ಕೋರಿದರು. ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್, ಸಹಕಾರ ಸಚಿವ ಎಚ್.ಎಸ್. ಮಹದೇವಪ್ರಸಾದ್, ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರನ್ನು ಭೇಟಿ ಮಾಡಿ ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸುವಂತೆ ಕೋರಿದರು.
ಜಿಪಂ ಸದಸ್ಯರಾದ ಕೂರ್ಗಳ್ಳಿ ಮಹದೇವು, ಜವರಪ್ಪ, ಪಟೇಲ್ ಜವರೇಗೌಡ, ರಮೇಶ್, ರಾಜಯ್ಯ, ಸಿದ್ದೇಗೌಡ, ಎಲ್. ಮಾದಪ್ಪ, ಮಹದೇವು, ಮಂಜುಳಾ ರಾಜ್, ಸುಧಾ ಮಹದೇವಯ್ಯ, ನಂದಿನಿ ಚಂದ್ರಶೇಖರ್, ಡಾ. ಪುಷ್ಪಾವತಿ ಅಮರನಾಥ್, ಶಕುಂತಲಾ ವೆಂಕಟಯ್ಯ, ರೇವಮ್ಮ ಮಾಲೇಗೌಡ, ಪುಷ್ಪಲತಾ ರಮೇಶ್, ರೇಣುಕಾ ನಾಗರಾಜ್, ಕಾವೇರಿ ಶೇಖರ್, ಮಲ್ಲಿಕಾರ್ಜುನ್ ಇದ್ದರು.
ಮತ್ತೊಂದೆಡೆ ಜಿಪಂ ಜೆಡಿಎಸ್- ಬಿಜೆಪಿ ಸದಸ್ಯರು ಪ್ರತಿಪಕ್ಷ ನಾಯಕರಾದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಸನ್ಮಾನಿಸಿಸಿದರು. ಜಿಪಂ ಅಧ್ಯಕ್ಷ ಕಾ.ಪು. ಸಿದ್ದವೀರಪ್ಪ, ಸದಸ್ಯರಾದ ಜೆ. ಸುನೀತಾ ವೀರಪ್ಪಗೌಡ, ಸಿ.ಜೆ. ದ್ವಾರಕೀಶ್, ಚಿಕ್ಕಣ್ಣೇಗೌಡ, ಡಾ. ಶಿವರಾಂ, ಲಲಿತಾ ಜಿ.ಟಿ. ದೇವೇಗೌಡ, ಚಿಕ್ಕರಂಗನಾಯಕ, ದೇವರಾಜ್, ಮಂಜುನಾಥ್ ಇದ್ದರು. ಇವರಿಗೆ ಶಾಸಕರಾದ ಜಿ.ಟಿ. ದೇವೇಗೌಡ, ಎಸ್. ಚಿಕ್ಕಮಾದು, ಸಾ.ರಾ. ಮಹೇಶ್ ಸಾಥ್ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

