ಅರಣ್ಯ ಸಂರಕ್ಷಣೆಗೆ ಕೈಜೋಡಿಸಿ: ರವಿ
ಮೈಸೂರು: ನಮ್ಮ ಜೀವನಾಡಿಯಾಗಿರುವ ಅರಣ್ಯ, ಭೂಮಿ ರಕ್ಷಣೆಗೆ ಅಗತ್ಯವಾದ ಯೋಜನೆ ರೂಪಿಸಬೇಕಾಗಿದೆ ಎಂದು ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ರವಿ ಅಭಿಪ್ರಾಯಪಟ್ಟರು. ನಗರದ ಮೃಗಾಲಯದಲ್ಲಿ ಬುಧವಾರ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಪರಿಸರ ಸಂರಕ್ಷಿಸುವ ಮೂಲಕ ಖನಿಜ ಸಂಪನ್ಮೂಲ ಹಾಗೂ ಅರಣ್ಯ ರಕ್ಷಿಸಬೇಕು. ಈ ನಿಟ್ಟಿನಲ್ಲಿ ಮೈಸೂರು ಮೃಗಾಲಯ ಕಾರ್ಯೋನ್ಮುಖವಾಗಿದೆ ಎಂದರು. ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುರೇಶ್ಕುಮಾರ್ ಇದ್ದರು.
ಬಹುಮಾನ ವಿತರಣೆ: ಪರಿಸರ ದಿನಾಚರಣೆ ಪ್ರಯುಕ್ತ ಮೃಗಾಲಯದಿಂದ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆ ಹಾಗೂ ಪಕ್ಷಿಗಳನ್ನು ಗುರುತಿಸುವ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಚಿತ್ರಕಲಾ ಸ್ಪರ್ಧೆಯಲ್ಲಿ ರೋಟರಿ ಪಶ್ಚಿಮ ಶಾಲೆಯ ವಿಶಾಲ್ (ಪ್ರಥಮ), ಚಿನ್ಮಯಿ (ದ್ವಿತೀಯ) ಹಾಗೂ ಜೆಎಸ್ಎಸ್ ಪ್ರೌಢ ಶಾಲೆಯ ಪೂಜಶ್ರೀ (ತೃತೀಯ), ಹಕ್ಕಿ ಗುರುತಿಸುವ ಸ್ಪರ್ಧೆಯಲ್ಲಿ ಯುವರಾಜ ಕಾಲೇಜಿನ ಜಿ. ಪ್ರಶಾಂತ್. (ಪ್ರಥಮ), ಮಾನಸ ಗಂಗೋತ್ರಿಯ ಜಿ.ಪಿ. ಪ್ರಶಾಂತ್ (ದ್ವಿತೀಯ), ವಿಜಯ ವಿಠಲ ಕಾಜೇಜಿನ ಎಸ್. ಅರ್ಜುನ್ (ತೃತೀಯ) ಬಹುಮಾನ ಪಡೆದುಕೊಂಡರು.
ಮೌಲ್ಯಮಾಪಕರ ಪ್ರತಿಭಟನೆ
ಕ.ಪ್ರ. ವಾರ್ತೆ, ಮೈಸೂರು, ಜೂ.5
ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಆಗಮಿಸಿದ್ದ ಅಧ್ಯಾಪಕರಿಗೆ ವಿವಿ ಸಿಬ್ಬಂದಿ ಅಗೌರವ ತೋರಿಸಿದ್ದಾರೆ ಎಂದು ಆರೋಪಿಸಿ ಅಧ್ಯಾಪಕರು ಕೆಲಕಾಲ ಪ್ರತಿಭಟಿಸಿದ ಘಟನೆ ಬುಧವಾರ ನಡೆದಿದೆ. ಮೌಲ್ಯಮಾಪನಕ್ಕೆ ಆಗಮಿಸಿದ್ದ ಕೆಲವು ಮಂದಿಗೆ ವಿವಿಯಿಂದ ಲಿಖಿತ ರೂಪದಲ್ಲಿ ಆಹ್ವಾನ ನೀಡಲಾಗಿತ್ತು. ಆಹ್ವಾನ ನೀಡದೆ ಆಗಮಿಸಿದ್ದ ಅಧ್ಯಾಪಕರು ತಮಗೆ ಅಗೌರವ ತೋರಲಾಗಿದೆ ಎಂದು ವಿವಿ ಸಿಬ್ಬಂದಿಗೆ ದೂರು ಸಲ್ಲಿಸಿದರು. ಸಿಬ್ಬಂದಿ ದೂರು ಸ್ವೀಕರಿಸದೆ ಅಧ್ಯಾಪಕರೊಂದಿಗೆ ಅನುಚಿತವಾಗಿ ವರ್ತಿಸಿದ ಹಿನ್ನೆಲೆ ಅಧ್ಯಾಪಕರು ಮೌಲ್ಯಮಾಪನ ಬಹಿಷ್ಕರಿಸಿ ಕೆಲಕಾಲ ಪ್ರತಿಭಟಿಸಿದರು.
ಕೆಪಿಎಸ್ಸಿ ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ
ಮೈಸೂರು: ಕರ್ನಾಟಕ ಲೋಕಸೇವಾ ಆಯೋಗವು ನಗರದ 24 ಪರೀಕ್ಷಾ ಕೇಂದ್ರಗಳಲ್ಲಿ ಅಬಕಾರಿ ಉಪನಿರೀಕ್ಷಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು ಜೂ. 9 ರಂದು ಹಾಗೂ ಅಬಕಾರಿ ರಕ್ಷಕರ ಹುದ್ದೆಗಳ ಪರೀಕ್ಷೆ ಜೂ. 16 ರಂದು ನಡೆಸಲಿದೆ. ಅಂದು ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ನಗರದ 24 ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲೂ ನಿಷೇಧಿತ ಪ್ರದೇಶವೆಂದು ಪೊಲೀಸ್ ಆಯುಕ್ತ ಕೆ.ಎಲ್. ಸುಧೀರ್ ಘೋಷಿಸಿದ್ದಾರೆ. ಈ ಪರೀಕ್ಷಾ ಕೇಂದ್ರಗಳ ಬಳಿಯಿರುವ ಜೆರಾಕ್ಸ್ ಹಾಗೂ ಲೇಖನ ಸಾಮಗ್ರಿ ಅಂಗಡಿ ಮುಚ್ಚಲು ಆದೇಶಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

