ಮೈಸೂರು

25 ಬಡ ರೋಗಿಗಳಿಗೆ ಆಂಜಿಯೋಪ್ಲಾಸ್ಟಿ ಉಚಿತ ಚಿಕಿತ್ಸೆ

Published On :

ಕ.ಪ್ರ.ವಾರ್ತೆ  ಮೈಸೂರು  ಜೂ. 9
ಇಲ್ಲಿನ ಜಯದೇವ ಹೃದ್ರೋಗ ಮತ್ತು ವಿಜ್ಞಾನ ಸಂಸ್ಥೆ ಹಾಗೂ ಅಮೆರಿಕದ ಡಾ.ಜಿ. ಸುಬ್ರಹ್ಮಣ್ಯಂ ಹಾರ್ಟ್ ಫೌಂಡೇಶನ್ ಸಹಯೋಗದೊಂದಿಗೆ 25 ಬಡ ರೋಗಿಗಳಿಗೆ ಉಚಿತವಾಗಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿ, ಸ್ಟಂಟ್ ಅಳವಡಿಸಲಾಗಿದೆ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಹೇಳಿದರು.
ಕೆ.ಆರ್. ಆಸ್ಪತ್ರೆ ಆವರಣದಲ್ಲಿರುವ ಜಯದೇವ ಹೃದ್ರೋಗ ಮತ್ತು ವಿಜ್ಞಾನ ಸಂಸ್ಥೆಗೆ ಶನಿವಾರ ಭೇಟಿ ನೀಡಿ, ಶಸ್ತ್ರಚಿಕಿತ್ಸೆ ನಡೆಸಿದ ನಂತರ ಮಾತನಾಡಿ, ಬೆಂಗಳೂರಿನಲ್ಲಿ ಕಳೆದ ವಾರ ಸುಬ್ರಹ್ಮಣ್ಯಂ ಹಾರ್ಟ್ ಫೌಂಡೇಶನ್ ಹಾಗೂ ಮೆಟ್ರಾನಿಕ್ ವ್ಯಾಸ್ಕ್ಯುಲರ್ ಡಿವಿಜನ್ (ಯುಎಸ್ಎ) ಸಹಯೋಗದಲ್ಲಿ 5 ದಿನಗಳಲ್ಲಿ 175 ಬಡ ರೋಗಿಗಳಿಗೆ ಉಚಿತ ಆಂಜಿಯೋಪ್ಲಾಸ್ಟಿ ಕಾರ್ಯಾಗಾರ ನಡೆಸಿ ಯಶಸ್ವಿಯಾಗಿದ್ದು, ಇದೊಂದು ವಿಶ್ವದಾಖಲೆಯಾಗಿದೆ ಎಂದು ತಿಳಿಸಿದರು.
ಡಾ.ಜಿ. ಸುಬ್ರಹ್ಮಣ್ಯಂ, ಡಾ. ದೇವರಾಜ್, ಡಾ. ಹರ್ಷ ಬಸಪ್ಪ, ಡಾ. ಭಾರತಿ, ಡಾ. ಸಂತೋಷ್, ಡಾ. ರಾಕೇಶ್, ನರ್ಸಿಂಗ್ ಅಧೀಕ್ಷಕಿ ಸಕ್ಕೂಬಾಯಿ, ಚಂಪಕಮಾಲ, ವೇಣುಗೋಪಾಲ್, ಗುರುಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.