ಮೈಸೂರು

ಮೋದಿ ಆಯ್ಕೆಗೆ ಸ್ವಾಗತ

Published On :

ಟಿ. ನರಸೀಪುರ: ಗುಜರಾತ್ ಸಿಎಂ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣೆಯ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದರಿಂದ ಕೇಂದ್ರ ಸರ್ಕಾರದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ಬಹುತೇಕ ನಿಶ್ಚಿತ ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಎಂ.ರಾಮಚಂದ್ರ ಹೇಳಿದ್ದಾರೆ. 2014ರ ಲೋಕಸಭೆಯ ಸಾರ್ವತ್ರಿಕ ಚುನಾವಣೆಯ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ನರೇಂದ್ರ ಮೋದಿ ಅವರು ಆಯ್ಕೆಯಾಗಿರುವುದು ರಾಷ್ಟ್ರೀಯ ಮಟ್ಟದಲ್ಲಿ ಹಾಗೂ ರಾಜ್ಯ ಬಿಜೆಪಿಯಲ್ಲಿಯೂ ಹೊಸದೊಂದು ಸಂಚಲನ ಮೂಡಿದೆ ಎಂದಿದ್ದಾರೆ.
ಅಕ್ರಮ ಮರಳು: 4 ಲಾರಿ ವಶ
ಟಿ. ನರಸೀಪುರ: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ನಾಲ್ಕು ಲಾರಿಗಳನ್ನು ತಾಲೂಕಿನ ಚನ್ನಬಸವನಹುಂಡಿ ಗ್ರಾಮದ ಬಳಿ ಕಳೆದ ರಾತ್ರಿ ಗಸ್ತಿನಲ್ಲಿದ್ದ ಹಿರಿಯ ಪೊಲೀಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ತಾಲೂಕಿನಲ್ಲಿ ರಾತ್ರಿಯ ವೇಳೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ. ಮೋಹನ್ರೆಡ್ಡಿ ನೇತೃತ್ವದಲ್ಲಿ ಚನ್ನಬಸವನಹುಂಡಿ ಗ್ರಾಮ ಬಳಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಬೆಂಗಳೂರಿಗೆ ಅಕ್ರಮವಾಗಿ ಮರಳನ್ನು ಸಾಗಾಣಿಕೆ ಮಾಡುತ್ತಿದ್ದ ಸುರೇಶ್ ಎಂಬವರಿಗೆ ಸೇರಿದ ಎರಡು ಲಾರಿ ಹಾಗೂ ನಿಂಗರಾಜು ಎಂಬವರಿಗೆ ಸೇರಿದ ಮತ್ತೆರಡು ಲಾರಿಗಳನ್ನು ವಶಪಡಿಸಿಕೊಂಡರು. ಕಾರ್ಯಾಚರಣೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಪೆಕ್ಟರ್ ಕೆ.ಆರ್. ಗೋಪಿಕೃಷ್ಣ, ಮುಖ್ಯ ಪೇದೆ ಮೂರ್ತಿ, ಸಿಬ್ಬಂದಿಗಳಾದ ಜವರಪ್ಪ, ಶ್ರೀನಿವಾಸ್, ಗೋಪಾಲ್ ಇದ್ದರು.
ಕಾರಿನಲ್ಲಿ ಬಂದು ಸರ ಅಪಹರಣ
ಎಚ್.ಡಿ. ಕೋಟೆ:  ಮಹಿಳೆಯ ಮಾಂಗಲ್ಯ ಸರವನ್ನು ಕಾರಿನಲ್ಲಿ ಬಂದ ಮೂವರು ಅಪಹರಿಸಿ ಪರಾರಿಯಾಗಿರುವ ಘಟನೆ ತಾಲೂಕಿನ ಕಾಡು ಹಂಪಾಪುರ- ಪಡುಕೋಟೆ ಮಧ್ಯ ಭಾಗದ ಜನನಿಬಿಡ ಪ್ರದೇಶದಲ್ಲಿ ಇತ್ತೀಚೆಗೆ ಜರುಗಿದೆ. ತಾಲೂಕಿನ ಅಣ್ಣೂರು- ಹೊಸಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಸಹ ಶಿಕ್ಷಕಿ  ಡಿ. ಕವಿತಾ ತನ್ನ ಪುತ್ರಿಯ ಜೊತೆಯಲ್ಲಿ ಶಾಲೆ ಮುಗಿಸಿ ಗದ್ದಿಗೆ ಮಾರ್ಗವಾಗಿ ಬಸವನಹಳ್ಳಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ, ಕಾರಿನಲ್ಲಿ ಬಂದ ಮೂವರು ಆಕೆಯನ್ನು ಹೆದರಿಸಿ ಕತ್ತಿನಲ್ಲಿದ್ದ ಮಾಂಗಲ್ಯ ಸರವನ್ನು ನೀಡುವಂತೆ ಒತ್ತಾಯಿಸಿದರು. ಆದರೆ ಇದಕ್ಕೆ ನಿರಾಕರಿಸಿದ್ದರಿಂದ ಆಕೆಯ ಕತ್ತಿಗೆ ಕೈ ಸುಮಾರು 50 ಗ್ರಾಂ ತೂಕದ ಸರ ಅಪಹರಿಸಿ ಪರಾರಿಯಾಗಿದರು. ಈ ಸಂಬಂಧ ಶಿಕ್ಷಕಿ ಕವಿತಾ ಪಟ್ಟಣದ ಪೊಲೀಸರಿಗೆ ದೂರು ನೀಡಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.