ಶುದ್ಧ ಕುಡಿಯುವ ನೀರು ಪೂರೈಕೆಗೆ ಶಾಸಕ ಸೂಚನೆ
ಕ.ಪ್ರ.ವಾರ್ತೆ ಎಚ್.ಡಿ. ಕೋಟೆ ಜೂ. 10
ಜಿಲ್ಲೆಯಲ್ಲಿ ಡೆಂಘೀ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆ ತಾಪಂ ಸಭಾಂಗಣದಲ್ಲಿ ಶಾಸಕ ಎಸ್. ಚಿಕ್ಕಮಾದು ನೇತೃತ್ವದಲ್ಲಿ ಆರೋಗ್ಯ ಇಲಾಖೆ ಹಾಗೂ ಗ್ರಾಪಂ ಅಧಿಕಾರಿಗ ಸಭೆ ನಡೆಯಿತು.
ಸಭೆಯಲ್ಲಿ ತಾ. ಆರೋಗ್ಯಾಧಿಕಾರಿ ರವಿ ಮಾತನಾಡಿ, ತಾಲೂಕಿನ ಮೊಸರೆ ಹಳ್ಳದಲ್ಲಿ ಕಳೆದ ತಿಂಗಳು ಒಬ್ಬರು ಡೆಂಘೀ ಜ್ವರಕ್ಕೆ ತುತ್ತಾಗಿರುವುದನ್ನು ಹೊರತುಪಡಿಸಿದರೆ, ತಾಲೂಕಿನಲ್ಲಿ ಯಾವುದೆ ಪ್ರಕರಣ ಕಂಡು ಬಂದಿಲ್ಲ. ಈ ಸಂಬಂಧ ತಾಲೂಕಿನ ಪ್ರತಿ ಗ್ರಾಪಂ ಮಟ್ಟದಲ್ಲಿ ಪಂಚಾಯಿತಿ ಅಧಿಕಾರಿಗಳ ಜೊತೆ ಕಾಯಿಲೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಪ್ರತಿ ಹಳ್ಳಿಯಲ್ಲಿಯೂ ಶಾಲಾ ಮಕ್ಕಳಿಂದ ಜಾಗೃತಿ ಜಾಥಾ ನಡಡೆಸಲಾಗುತ್ತಿದೆ. ಪ್ರತಿ ಮನೆಯವರಿಗೆ ಕರಪತ್ರ ಹಂಚಲಾಗುತ್ತಿದ್ದು, ಕಾಯಿಲೆಗೆ ಸಂಬಂಧಿಸಿದಂತೆ ಚಲನಚಿತ್ರ ಸಹ ಪ್ರದರ್ಶಿಸಲಾಗುತ್ತಿದೆ. ಪ್ರತಿ ಗ್ರಾಮದಲ್ಲಿಯೂ ಸ್ವಚ್ಛತೆ ಕಾಪಾಡುವಂತೆ ಎಚ್ಚರ ವಹಿಸಲಾಗುತ್ತಿದೆ. ಪ್ರತಿ ಪಂಚಾಯಿತಿಯಲ್ಲು ಶುದ್ಧ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಚರಂಡಿ ಸ್ವಚ್ಛಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಶಾಸಕ ಎಸ್. ಚಿಕ್ಕಮಾದು ಮಾತನಾಡಿ, ಗ್ರಾಪಂ ಅಧಿಕಾರಿಗಳು ಟ್ಯಾಂಕ್ಗಳಿಗೆ ನೀರು ತುಂಬುವಾಗ ಹಾಗೂ ಹರಿಸುವಾಗ ಸೋರಿಕೆ ಕಂಡು ಬಂದರೆ ಕೂಡಲೇ ಸರಿಪಡಿಸಬೇಕು. ಟ್ಯಾಂಕ್ಗಳನ್ನು ತೊಳೆದು ಶುದ್ಧಗೊಳಿಸಬೇಕು. ಯಾವುದೇ ಪಂಚಾಯಿತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯು ಕಂಡು ಬಂದರೆ ಸುಮ್ಮನಾಗುವುದಿಲ್ಲ. ಪ್ರತಿಯೊಬ್ಬರೂ ತಮ್ಮ ಕೆಲಸವನ್ನು ಜವಾಬ್ದಾರಿಯುತವಾಗಿ ನಿಭಾಯಿಸಬೇಕು.
ಪಂಚಾಯಿತಿ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯವರು ಪ್ರತಿ ಹಳ್ಳಿಗೂ ತೆರಳಿ ಮಾಹಿತಿ ಕಲೆ ಹಾಕಬೇಕು. ಯಾವುದೇ ಜಾಗದಲ್ಲಿಯೂ ನೀರು ನಿಲ್ಲದಂತೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ತಾಪಂ ಅಧ್ಯಕ್ಷೆ ಲಕ್ಷ್ಮೀ ರಮೇಶ್, ಉಪಾಧ್ಯಕ್ಷ ಮಹೇಂದ್ರ, ಸದಸ್ಯ ಮಹದೇವಪ್ಪ, ತಹಸೀಲ್ದಾರ್ ಕೃಷ್ಣ, ಗ್ರಾಪಂ ಪಿಡಿಒ ಹಾಗೂ ವೈದ್ಯರು, ಜಿಪಂ ಎಇಇ ಶ್ರೀಕಂಠಮೂರ್ತಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

