ಮೈಸೂರು

ವಿದ್ಯಾರ್ಥಿಗಳಲ್ಲಿ ಪರಿಸರ ಪ್ರಜ್ಞೆ ಮೂಡಿಸಿ

Published On :

ಕ.ಪ್ರ.ವಾರ್ತೆ   ಹುಣಸೂರು   ಜೂ.11
ಪ್ರಸ್ತುತ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ಮೇಲೆ ಪ್ರೀತಿ, ಪ್ರಜ್ಞೆಯನ್ನು ಪೋಷಕರು ಮತ್ತು ಶಿಕ್ಷಕರು ಮೂಡಿಸಿದಾಗ ಮಾತ್ರ ದೇಶಪ್ರೇಮ ಹಾಗೂ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಜಿಪಂ ಸದಸ್ಯೆ ಡಾ. ಪುಷ್ಪಾ ಅಮರನಾಥ್ ಅಭಿಪ್ರಾಯಪಟ್ಟರು.ತಾಲೂಕಿನ ರತ್ನಪುರಿ ಗ್ರಾಮದಲ್ಲಿ ಮಂಗಳವಾರ ಓಂ ಶ್ರೀ ಸಾಯಿ ರೂರಲ್ ಡೆವಲಪ್ಮೆಂಟ್ ಸಂಸ್ಥೆಯು ಶಾಲಾ ಅವರಣದಲ್ಲಿ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮ ಮತ್ತು ಉಚಿತ ನೋಟ್ ಪುಸ್ತಕಗಳ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿ, ಪರಿಸರದ ಅಸಮತೋಲನದಿಂದ ಸಕಾಲದಲ್ಲಿ ಮಳೆ ಬೆಳೆಯಾಗದೆ ಒಂದಡೆ ಬರಗಾಲ ಹೆಚ್ಚಾಗುತ್ತಿದ್ದರೆ, ಇನ್ನೊಂದಡೆ ಉತ್ತಮವಾದ ಗಾಳಿ, ಬೆಳಕು ಪರಿಸರವಿಲ್ಲದೆ ಮಾನವನ ಮೇಲೂ ಪರಿಣಾಮ ಬೀರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಸಂಸ್ಥೆಯ ಕಾರ್ಯದರ್ಶಿ ಮಹದೇವಸ್ವಾಮಿ ಮಾತನಾಡಿ, ಶಿಕ್ಷಣ ಪ್ರತಿಯೊಬ್ಬರಿಗೂ ಸಿಗಬೇಕು ಮತ್ತು ಪಡೆದುಕೊಂಡಾಗ ಮಾತ್ರ ದೇಶದ ಅಭಿವೃದ್ಧಿ ಕಾಣಲು ಸಾಧ್ಯ ಎಂದು ಹೇಳಿದರು.
ಗಿಡ ನೆಡುವ ಕಾರ್ಯಕ್ರಮ: ಡಾ. ಪುಷ್ಪಾವತಿ ಅಮರನಾಥ್ ರತ್ನಪುರಿ ಗ್ರಾಮದ ಪ್ರಮುಖ ರಸ್ತೆ ಬದಿಯಲ್ಲಿ ವಿವಿಧ ಬಗೆಯ ಗಿಡಗಳನ್ನು ಗ್ರಾಮಸ್ಥರು ಮತ್ತು ಸಂಸ್ಥೆಯ ಸಹಕಾರದಿಂದ ನೆಟ್ಟರು. ಸಂಸ್ಥೆಯಿಂದ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ವಿತರಿಸಿದರು.
ಶಿವರಾಜೇಗೌಡ, ಸಂಸ್ಥೆಯ ಕಾರ್ಯದರ್ಶಿ ದೀಲಿಪ್ ಮಾತನಾಡಿದರು. ಐಟಿಐ ಶಿಕ್ಷಕ ಕಿರಣ್ ನಿರೂಪಿಸಿದರು. ಶಿಕ್ಷಕಿ ರಾಜೇಶ್ವರಿ ಸ್ವಾಗತಿಸಿದರು. ವೆಂಕಟೇಶ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.