ಮೈಸೂರು

ಬೇಡಿಕೆ ಈಡೇರಿಕೆಗಾಗಿ ಲಾರಿ ಮಾಲೀಕರ ಪ್ರತಿಭಟನೆ

Published On :

ಕ.ಪ್ರ.ವಾರ್ತೆ    ಟಿ. ನರಸೀಪುರ    ಜೂ. 12
ಅಕ್ರಮ ಮರಳು ಸಾಗಾಣಿಕೆಗೆ ಕುಮ್ಮಕ್ಕು ನೀಡುತ್ತಾ, ಪ್ರಾಮಾಣಿಕವಾಗಿ ಮರಳು ಸಾಗಾಣಿಕೆ ಮಾಡಲು ಪರ್ಮಿಟ್ ನೀಡದಿರುವ ಜಿಲ್ಲಾ ಹಾಗೂ ತಾಲೂಕು ಆಡಳಿತದ ಕ್ರಮ ಖಂಡಿಸಿ, ಲಾರಿ ಮಾಲೀಕರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ತಾಲೂಕಿನ ಲಾರಿ ಮಾಲೀಕರು ಬುಧವಾರ ಲೋಕೋಪಯೋಗಿ ಇಲಾಖೆ ಕಚೇರಿ ಎದುರು ಪ್ರತಿಭಟಿಸಿದರು.
ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕಚೇರಿ ಎದುರು ಮರಳು ನೀಡುವುದರಲ್ಲಿ ನಿರಂತರವಾಗಿ ಅನ್ಯಾಯವಾಗುತ್ತಿರುವ ಹಿನ್ನೆಲೆ ಅನಿರ್ದಿಷ್ಟಾವಧಿ ಧರಣಿ ಪ್ರಾರಂಭಿಸಿರುವ ಲಾರಿ ಮಾಲೀಕರು, ಜಿಲ್ಲಾಡಳಿತ ಲೋಕೋಪಯೋಗಿ ಇಲಾಖೆ ಮೂಲಕ ವಾರಕ್ಕೊಂದು ಪರ್ಮಿಟ್ ನೀಡುತ್ತಾ ಪ್ರಾಮಾಣಿಕವಾಗಿ ಮರಳು ಸಾಗಾಣಿಕೆ ಮಾಡುವ ಲಾರಿ ಮಾಲೀಕರಿಗೆ ತೊಂದರೆ ನೀಡುತ್ತಿದೆ. ಕದ್ದು ಮರಳು ಸಾಗಾಣೆ ಮಾಡುವವರಿಗೆ ಸಹಕಾರ ನೀಡುತ್ತಿದೆ ಎಂದು ಆರೋಪಿಸಿದರು.
ಮರಳು ನೀತಿಯಂತೆಯೇ ಲಾರಿ ಮಾಲೀಕರ ವಿವಿಧ ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ. ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಸೂಕ್ತ ಭರವಸೆ ನೀಡುವವರೆಗೂ ಹೋರಾಟ ನಿಲ್ಲದು ಎಂದು ಎಚ್ಚರಿಸಿದರು.
ತಾ. ಲಾರಿ ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸೋಸಲೆ ಎಂ. ಪುಟ್ಟಸ್ವಾಮಿ ಮಾತನಾಡಿದರು. ಸಂಘದ ಗೌರವ ಕಾರ್ಯದರ್ಶಿ ಸೆಮಿವುಲ್ಲಾ, ಖಜಾಂಚಿ ರವೀಶ್, ಕಾರ್ಯದರ್ಶಿ ಮಲ್ಲೇಶ್, ಲಾರಿ ಮಾಲೀಕರಾದ ನಾಜೀಮ್, ಯಡದೊರೆ ಉಮೇಶ್, ಕೃಷ್ಣ, ಮುನಾವರ ಪಾಷ, ಕೆಂಪಯ್ಯನಹುಂಡಿ ನಟರಾಜು, ಸಲೀಮ್, ಕೆಂಡನಕೊಪ್ಪಲು ರಂಗಸ್ವಾಮಿ, ರಂಗಯ್ಯ ಭಾಗವಹಿಸಿದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.