ಬಾಲ ಕಾರ್ಮಿಕ ಪದ್ಧತಿ ಕಂಡುಬಂದಲ್ಲಿ ಕಠಿಣ ಕ್ರಮ
ಕ.ಪ್ರ.ವಾರ್ತೆ ಹುಣಸೂರು ಜೂ.13
ಬಾಲಕಾರ್ಮಿಕರನ್ನು ಜೀತಕ್ಕೆ ಇಟ್ಟುಕೊಳ್ಳಬಾರದು ಹಾಗೂ ದುಡಿಸಿಕೊಳ್ಳಬಾರದು. ಒಂದು ವೇಳೆ ಬಳಸಿಕೊಳ್ಳುವ ವ್ಯಕ್ತಿಗಳು ಎಷ್ಟೇ ಬಲಿಷ್ಠರಾಗಿದ್ದರೂ ಶಿಕ್ಷೆಗೆ ಒಳಪಡಿಸಲಾಗುತ್ತದೆ ಎಂದು ತಹಸೀಲ್ದಾರ್ ಶಿವಾನಂದಮೂರ್ತಿ ಎಚ್ಚರಿಕೆ ನೀಡಿದರು.
ವಿಶ್ವ ಬಾಲಕಾರ್ಮಿಕ ದಿನಾಚರಣೆಯ ಅಂಗವಾಗಿ ತಾಲೂಕು ಆಡಳಿತ, ಕಾರ್ಮಿಕ ಇಲಾಖೆ ಹಾಗೂ ಡೀಡ್ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಾಲಕಾರ್ಮಿಕರನ್ನು ಜೀತಕ್ಕೆ ಇಟ್ಟುಕೊಳ್ಳುವವರು ಮತ್ತು ದುಡಿಸಿಕೊಳ್ಳುವ ಬಗ್ಗೆ ದೂರು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.
ಇದಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಕೋರಿದರು.
ಡೀಡ್ ಸಂಸ್ಥೆಯ ಜಿ.ಎಸ್. ಜಗದೀಶ್ ಮಾತನಾಡಿ, ಕಳೆದ ಐದು ವರ್ಷಗಳಿಂದ ನಮ್ಮ ಬಾಲಕಾರ್ಮಿಕ ಪುನರ್ ವಸತಿ ಶಾಲೆಯಲ್ಲಿ ಸುಮಾರು 266 ಮಕ್ಕಳನ್ನು ದಾಖಲಾತಿ ಮಾಡಿಕೊಂಡಿದೆ. ಇವರಲ್ಲಿ ಕೆಲವು ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಸುಮಾರು 176 ಮಕ್ಕಳನ್ನು ದಾಖಲು ಮಾಡಿದ್ದೇವೆ. ಸುಮಾರು 76 ಮಕ್ಕಳು ಶಾಲೆ ಬಿಟ್ಟಿದ್ದಾರೆ. ಹಾಲಿ ಬಾಲಕಾರ್ಮಿಕ ಪುನರ್ ವಸತಿ ಶಾಲೆಯಲ್ಲಿ 20 ಮಕ್ಕಳು ವಿಧ್ಯಾಭ್ಯಾಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಎಚ್.ಡಿ. ಕೋಟೆ ವೃತ್ತದಿಂದ ಪುರಸಭೆ ಮೈದಾನದವರೆಗೆ ಮಕ್ಕಳು ಜಾಥಾ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಸರ್ಕಲ್ ಇನ್ಸ್ಪೆಕ್ಟರ್ ಚಂದ್ರಶೇಖರ್, ಕಾರ್ಮಿಕ ಅಧಿಕಾರಿ ಶಶಿಧರ್, ಡೀಡ್ ಸಂಸ್ಥೆಯ ಜಿ.ಎಸ್. ಜಗದೀಶ್, ಶಿಕ್ಷಣ ಇಲಾಖೆಯ ಸಿಆರ್ಪಿ ಮಹೇಶ್, ಬಿಆರ್ಪಿ ಮಹೇಶ, ಆರ್ಐ ಸೋಮಶೇಖರ್, ವರ್ತಕರ ಸಂಘದ ಅಧ್ಯಕ್ಷ ಅನಂತೇಗೌಡ, ಕಾರ್ಯದರ್ಶಿ ಟಿ.ಡಿ. ನಾರಾಯಣ, ಬಾಲಕಾರ್ಮಿಕ ಶಾಲೆಯ ಮಕ್ಕಳು, ಸರ್ಕಾರಿ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಮಿಕ ಅಧಿಕಾರಿ ಶಶಿಧರ್ ಸ್ವಾಗತಿಸಿದರು. ಜಿ.ಎಸ್. ಜಗದೀಶ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

