ಮೈಸೂರು

ಸಮ್ಮೇಳನಾಧ್ಯಕ್ಷರ ಅದ್ಧೂರಿ ಮೆರವಣಿಗೆ

Published On :

ಜೆ. ಮಹದೇವ
ನಂಜನಗೂಡು: ಕಪಿಲೆಯ ದಡದಲ್ಲಿ ಏರ್ಪಡಿಸಿರುವ ಮೈಸೂರು ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿರುವ ಪ್ರೊ.ಮಲೆಯೂರು ಗುರುಸ್ವಾಮಿ ಅವರನ್ನು ಪುಷ್ಪಗಳಿಂದ ಅಲಂಕೃತಗೊಂಡಿದ್ದ ತೆರೆದ ವಾಹನದಲ್ಲಿ ಶನಿವಾರ ಅದ್ಧೂರಿ ಮೆರವಣಿಗೆ ಮೂಲಕ ವೇದಿಕೆಗೆ ಕರೆತರಲಾಯಿತು.
ಪಟ್ಟಣದ ಹೆಜ್ಜಿಗೆ ಎಂ.ಲಿಂಗಣ್ಣ ವೃತ್ತದಿಂದ ಆರಂಭವಾದ ಮೆರವಣಿಗೆಗೆ ಜಿಪಂ ಅಧ್ಯಕ್ಷ ಕಾ.ಪು. ಸಿದ್ದವೀರಪ್ಪ ಚಾಲನೆ ನೀಡಿದರು. ನಂತರ ತೆರೆದ ವಾಹನದಲ್ಲಿ ಸಮ್ಮೇಳಾಧ್ಯಕ್ಷ ಪ್ರೊ.ಮಲೆಯೂರು ಗುರುಸ್ವಾಮಿ, ಕಸಾಪ ಜಿಲ್ಲಾಧ್ಯಕ್ಷ ಎಂ.ಚಂದ್ರಶೇಖರ್, ತಾಲೂಕು ಅಧ್ಯಕ್ಷ ಮಹೇಶ್ ಅತ್ತಿಖಾನೆ ಅವರನ್ನು ಶ್ರೀಕಂಠೇಶ್ವರ ದೇವಸ್ಥಾನ ಮುಂಭಾಗದ ಸಭಾಭವನಕ್ಕೆ ಕರೆತರಲಾಯಿತು. ಮೆರವಣಿಗೆಯ ಮುಂಚೂಣಿಯಲ್ಲಿ ನಂದಿ ಧ್ವಜ, ನೌಪತ್ ಆನೆ ಹೆಜ್ಜೆ ಹಾಕಿದವು. ಇದರ ಹಿಂದೆ ಸಮವಸ್ತ್ರ ಧರಿಸಿದ್ದ ಸುಮಾರು 28 ಶಾಲೆಗಳ ಮಕ್ಕಳು ಶಿಸ್ತುಬದ್ಧ ಪಥಸಂಚಲನ ನಡೆಸಿದರು.
ಕಲಾ ತಂಡಗಳ ಸೊಬಗು: ವಿಶ್ವವಿಖ್ಯಾತ ಮೈಸೂರು ದಸರೆಯಲ್ಲಿ ಪಾಲ್ಗೊಳ್ಳುವ ಬಹುತೇಕ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿ ಕನ್ನಡ ನಾಡಿನ ಸಾಂಸ್ಕೃತಿಕ ವೈಭವವನ್ನು ಮರುಕಳಿಸಿದವು. ಜಾನಪದ ಕಲಾ ತಂಡಗಳಾದ ಜಗ್ಗಲಿಗೆ ಪುರುವಂತಿಕೆ, ಕರಡಿ ಮಜಲು, ಚಂಡೇವಾದ್ಯ, ಕಂಸಾಳೆ, ನಗಾರಿ, ಪೂಜಾ ಕುಣಿತ, ಗಾರುಡಿಗೊಂಬೆ, ವೀರಭದ್ರ ಕುಣಿತ ನೃತ್ಯ ಜನರ ಗಮನ ಸೆಳೆದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.