ಮೈಸೂರು

ಇಂದು ಅಭಿವೃದ್ಧಿ ಕಾರ್ಯಕ್ರಮ

Published On :

ಮೈಸೂರು: ರಾಷ್ಟ್ರೀಯ ಆಹಾರ ಸಂಸ್ಕರಣಾ ಮಿಷನ್, ರಾಜ್ಯ ಆಹಾರ ಸಂಸ್ಕರಣಾ ಮಿಷನ್, ಕೃಷಿ ಇಲಾಖೆ, ಭಾರತೀಯ ಉದ್ಯಮಶೀಲತಾ ಅಭಿವೃದ್ಧಿ ಸಂಸ್ಥೆಯಿಂದ ಜೂ.17ರ ಬೆಳಗ್ಗೆ 11ಕ್ಕೆ ಹೆಬ್ಬಾಳಿನ ರೋಟರಿ ಸೆಂಟ್ರಲ್ ಅಸೋಸಿಯೇಷನ್ ಬಿಲ್ಡಿಂಗ್ನಲ್ಲಿ ಆರು ವಾರಗಳ ಅವಧಿಯ ಆಹಾರ ಸಂಸ್ಕರಣಾ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಕೃಷಿ ಮಾರಾಟ ಅಧ್ಯಯನ ಸಂಸ್ಥೆಯ ಪ್ರಾಂಶುಪಾಲ ಎಸ್. ದೇವರಾಜು ಉದ್ಘಾಟಿಸುವರು.
ಲಾರಿ ಮಾಲೀಕರ ಸಭೆ
ದಿ ಮೈಸೂರು ಸಿಟಿ ಲೋಕಲ್ ಲಾರಿ ಓನರ್ಸ್ ಅಸೋಸಿಯೇಷನ್ ವತಿಯಿಂದ ಜೂ.17ರ ಬೆಳಗ್ಗೆ 11ಕ್ಕೆ ಸಂಘದ ಕಚೇರಿಯಲ್ಲಿ ಲಾರಿ ಮಾಲೀಕರ ಸಭೆ ಕರೆಯಲಾಗಿದೆ ಎಂದು ಅಧ್ಯಕ್ಷ ಬಿ. ರೇವಣ್ಣ ತಿಳಿಸಿದ್ದಾರೆ.
ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಒಕ್ಕಲಿಗರ ಸಂಘ ಜಿಲ್ಲಾ ಘಟಕವು 2012-13ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಒಕ್ಕಲಿಗರ ಸಮಾಜದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಂಕಪಟ್ಟಿಯ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರ ಹಾಗೂ ಇತ್ತೀಚಿನ ಭಾವಚಿತ್ರವಿರುವ ಅರ್ಜಿಯನ್ನು ಒಕ್ಕಲಿಗರ ಸಂಘ, 2ನೇ ಮುಖ್ಯರಸ್ತೆ, ವಿದ್ಯಾರಣ್ಯಪುರಂ, ಮೈಸೂರು- 570 008. ಇಲ್ಲಿಗೆ ಜು.10 ರೊಳಗೆ ಸಲ್ಲಿಸುವಂತೆ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಸುರೇಶ್ಬಾಬು ತಿಳಿಸಿದ್ದಾರೆ. ದೂ. 0821- 2482944 ಸಂಪರ್ಕಿಸಬಹುದು.
ಇಂದು ಫಲಿತಾಂಶ
ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ನಡೆಸಲಾದ 2013ನೇ ಸಾಲಿನ ಬಿ.ಎ, ಬಿ.ಎಸ್ಸಿ, ಬಿ.ಕಾಂ, ಬಿ.ಬಿ.ಎಂ., ಬಿ.ಬಿ.ಎ. ಮತ್ತು ಬಿ.ಸಿ.ಎ.ನ ಎಲ್ಲಾ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶವನ್ನು ಜೂ.17 ರಂದು ಕಾಲೇಜಿನ ವೆಬ್ಸೈಟ್ ಢಿಢಿಢಿ.ಞಡಡ್ಛಢಿ.್ಟ್ಠ್ಜ ನಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಂಶುಪಾಲ ಪ್ರೊ.ಎನ್.ಪಿ. ಪದಕಿ ತಿಳಿಸಿದ್ದಾರೆ.
2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು
ಸಿದ್ದಾರ್ಥನಗರದ ನಿವಾಸಿ ಪ್ರತಾಪ್ ಎಂಬವರ ಮನೆಯ ಬೀಗ ಒಡೆದು 2 ಲಕ್ಷ ಮೌಲ್ಯದ 90 ಗ್ರಾಂ ಚಿನ್ನಾಭರಣ ಕಳವು ಮಾಡಿರುವ ಘಟನೆ ಭಾನುವಾರ ನಡೆದಿದೆ. ಪ್ರತಾಪ್ ಅವರು ವಿದ್ಯಾರಣ್ಯಪುರಮ್ಲ್ಲಿರುವ ತಮ್ಮ ಇನ್ನೊಂದು ಮನೆಗೆ ಶನಿವಾರ ಸಂಜೆ ಕುಟುಂಬ ಸಮೇತ ತೆರಳಿ ಅಲ್ಲಿಯೇ ವಾಸ್ತವ್ಯ ಹೂಡಿದ್ದರು. ಸಿದ್ದಾರ್ಥನಗರದ ಮನೆಯಲ್ಲಿ ಯಾರೂ ಇಲ್ಲದಿರುವ ಸಮಯ ನೋಡಿ ಹೊಂಚು ಹಾಕಿರುವ ಕಳ್ಳರು ಚಿನ್ನಾಭರಣ ಕಳವು ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.