ರೋಗಿ ಸಾವು: ಸಂಬಂಧಿಕರಿಂದ ವೈದ್ಯರ ಮೇಲೆ ಹಲ್ಲೆ
ಕ.ಪ್ರ. ವಾರ್ತೆ ಮೈಸೂರು ಜೂ.16
ಕಿಡ್ನಿ ಸಮಸ್ಯೆಯಿಂದ ಕೆ.ಆರ್. ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟ ರೋಗಿಯೊಬ್ಬರ ಸಂಬಂಧಿಕರು ವೈದ್ಯರ ಮೇಲೆ ಹಲ್ಲೆ ಮಾಡಿದ್ದನ್ನು ಖಂಡಿಸಿ ಆಸ್ಪತ್ರೆಯ ವೈದ್ಯರು ಪ್ರತಿಭಟಿಸಿದ ಘಟನೆ ಭಾನುವಾರ ಮಧ್ಯಾಹ್ನ ನಡೆಯಿತು.
ಕೊಳ್ಳೇಗಾಲ ತಾಲೂಕಿನ ಬೂದಂಬಾಳು ಗ್ರಾಮದ ಮುತ್ತು ವೆಂಕಟೇಶಯ್ಯ (75) ಎಂಬವರೇ ಮೃತಪಟ್ಟವರು. ಇವರ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಸಂಬಂಧಿಕರು ವೈದ್ಯರ ವಿರುದ್ಧ ಹರಿಹಾಯ್ದರು. ಅಲ್ಲದೇ ಆಸ್ಪತ್ರೆಯ ನಾಲ್ಕು ಮಂದಿ ವೈದ್ಯರ ಮೇಲೆ ಕೈ ಮಾಡಿದರು. ಇದರಿಂದ ಕುಪಿತಗೊಂಡ ಉಳಿದ ವೈದ್ಯರು ಆಸ್ಪತ್ರೆ ಆವರಣದಲ್ಲಿ ಪ್ರತಿಭಟಿಸಿದರು.
ನಾವು ನಮ್ಮ ಕರ್ತವ್ಯ ನಿರ್ವಹಿಸಿದ್ದೇವೆ. ಮೃತಪಟ್ಟ ವ್ಯಕ್ತಿ ಮೊದಲೇ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಅದರ ಜತೆಗೆ ವಯಸ್ಸಾದ ಮೇಲೆ ಕಾಡುವ ಕಾಯಿಲೆ ಇದ್ದಿದ್ದು ಸಾವಿಗೆ ಕಾರಣ ಹೊರತು, ನಮ್ಮ ನಿರ್ಲಕ್ಷ್ಯದಿಂದಲ್ಲ ಎಂದು ವೈದ್ಯರು ಹೇಳಿದ್ದಾರೆ. ಬಳಿಕ ಹಲ್ಲೆಗೊಳಗಾದ ಡಾ.ರಿಯಾಜ್ ಅಹಮ್ಮದ್, ಡಾ.ಬಿ. ಸಂತೋಷ್, ಡಾ.ಎನ್.ಎಸ್. ರವಿಚಂದ್ರ, ಡಾ.ಸಿ. ಶಕ್ತಿಕುಮಾರ್ ಮೈಸೂರು ವೈದ್ಯಕೀಯ ಕಾಲೇಜಿನ ಡೀನ್ ಡಾ.ಗೀತಾ ಕೆ. ಅವಧಾನಿ ಅವರನ್ನು ಭೇಟಿ ಮಾಡಿ ಅಳಲು ತೋಡಿಕೊಂಡರು. ದೇವರಾಜ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿಗಳ ವಿರುದ್ಧ ಕ್ರಮ ಜರುಗಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

