ಮೈಸೂರು

ಎಸಿಪಿ ಅಮಾನತಿಗೆ ಆಗ್ರಹ

Published On :

ಮೈಸೂರು: ಸಾರಿಗೆ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿರುವ ಡಿಎಆರ್ ಎಸಿಪಿ ಮಲ್ಲಿಕಾರ್ಜುನಪ್ಪ ಅವರನ್ನು ಅಮಾನತುಗೊಳಿಸಬೇಕು ಎಂದು ಕೆಎಸ್ಆರ್ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಯೂನಿಯನ್ ಮೈಸೂರು ಘಟಕ ಆಗ್ರಹಿಸಿದೆ. ನಗರ ಸಾರಿಗೆ ವಿಭಾಗದಲ್ಲಿ ಚಾಲಕರಾಗಿ ಕೆಲಸ ನಿರ್ವಹಿಸುತ್ತಿರುವ ಸೈಯದ್ ಉದ್ದೀನ್ ಅವರು ಕರ್ತವ್ಯದಲ್ಲಿ ಇದ್ದಾಗ, ಮನೆಯ ಬಳಿ ಹಾರ್ನ್ ಮಾಡಿದರು ಎಂಬ ಕಾರಣಕ್ಕೆ ಬಸ್ನ್ನು ಅಡ್ಡಗಟ್ಟಿ ಎಸಿಪಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಅವರ ಕುಟುಂಬದ ಸದಸ್ಯರು ಸಹ ಚಾಲಕನನ್ನು ನಿಂದಿಸಿದ್ದಾರೆ ಎಂದು ಸಂಘದ ಅಧ್ಯಕ್ಷ ಎಂ. ವಿಜಯಕುಮಾರ್ ಆರೋಪಿಸಿದ್ದಾರೆ. ಈ ಸಂಬಂಧ ಸಂಘದ ಪದಾಧಿಕಾರಿಗಳು ಪೊಲೀಸ್ ಆಯುಕ್ತರ ಬಳಿ ಹೋಗಿ ವಿಚಾರ ತಿಳಿಸಿದಾಗ ಹಲ್ಲೆ ಮಾಡಿದವರ ಮೇಲೆ ಸೂಕ್ತ ಕ್ರಮ ವಹಿಸುವುದಾಗಿ ತಿಳಿಸಿದ್ದಾರೆ. ಅಲ್ಲದೆ ಎಸಿಪಿ ಅವರ ವಿರುದ್ಧ ನಜರಬಾದ್ ಠಾಣೆಯಲ್ಲಿ ದೂರು ದಾಖಲಿಸುವಂತೆ ಸಲಹೆ ನೀಡಿದರು ಎಂದಿದ್ದಾರೆ.

ಆಲನಹಳ್ಳಿ: ಮುಖ್ಯ ಶಿಕ್ಷಕ ಅಮಾನತು
ಮೈಸೂರು: ಎಚ್.ಡಿ.ಕೋಟೆ ತಾಲೂಕು ಆಲನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ನಂಜುಂಡಸ್ವಾಮಿ ಅವರನ್ನು ಅಮಾನತುಗೊಳಿಸಿರುವುದು ಸ್ವಾಗತಾರ್ಹ ಎಂದು ಕರ್ನಾಟಕ ಸಾಮಾಜಿಕ ನ್ಯಾಯ ರಕ್ಷಣಾ ವೇದಿಕೆ ತಿಳಿಸಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡ ವಿದ್ಯಾರ್ಥಿಗಳಿಗೆ ಬ್ಯಾಗು, ನೋಟು ಪುಸ್ತಕಗಳ ವಿತರಣೆಯಲ್ಲಿ ನಂಜುಂಡಸ್ವಾಮಿ ಅವರು ವಂಚನೆ ಮಾಡಿದ್ದಾರೆ. ಅಷ್ಟೇ ಅಲ್ಲ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ ಎಂದು ಎಲ್ಲಾ ದಾಖಲೆಗಳ ಸಹಿತ ಅಂದಿನ ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರಿಗೆ ದೂರು ನೀಡಲಾಗಿತ್ತು ಎಂದು ವೇದಿಕೆ ರಾಜ್ಯ ಸಂಚಾಲಕ ಹಂ. ಲಕ್ಕೇಗೌಡ ತಿಳಿಸಿದ್ದಾರೆ. ಈ ಸಂಬಂಧ ಅಗತ್ಯ ಕ್ರಮ ವಹಿಸಿರುವ ಡಿಡಿಪಿಐ ಅವರು ಮುಖ್ಯಶಿಕ್ಷಕ ನಂಜುಂಡಸ್ವಾಮಿ ಅವರನ್ನು ಅಮಾನತುಗೊಳಿಸಿ ತನಿಖೆ ಕಾಯ್ದಿರಿಸಿದ್ದಾರೆ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.