ಮೈಸೂರು

ಅಂಗವಿಕಲ ಮಕ್ಕಳ ಏಳಿಗೆಗೆ ಸಹಕರಿಸಲು ಮನವಿ

Published On :

ಕ.ಪ್ರ.ವಾರ್ತೆ   ಕೆ.ಆರ್. ನಗರ   ಜೂ. 18
ಅಂಗವಿಕಲ ಮಕ್ಕಳಿಗೆ ಅನುಕಂಪ ತೋರಿಸುವ ಬದಲು ಅವರ ಏಳಿಗೆಗೆ ಸಹಕರಿಸಿ ಇತರ ಮಕ್ಕಳಂತೆ ಬದುಕಲು ಅವರಿಗೂ ಅವಕಾಶ ಮಾಡಿಕೊಡಬೇಕೆಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.
ಇಲ್ಲಿನ ಗುರುಭವನದಲ್ಲಿ ಮಂಗಳವಾರ ನಡೆದ ಅಂಗವಿಕಲ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಈ ಮಕ್ಕಳನ್ನು ತಾತ್ಸಾರದಿಂದ ನೋಡಬಾರದು. ಅವರಲ್ಲಿಯೂ ಪ್ರತಿಭೆ ಇದ್ದು, ಅದನ್ನು ಗುರುತಿಸಿ ಸೂಕ್ತ ವೇದಿಕೆ ನಿರ್ಮಾಣ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು.
ತಾಲೂಕಿನ 1,200 ಅಂಗವಿಕಲ ಮಕ್ಕಳಿಗೆ ವೈಯಕ್ತಿಕವಾಗಿ ಕಳೆದ ವರ್ಷ ನನ್ನ ಹುಟ್ಟುಹಬ್ಬದಂದು ವಿಮಾ ಪಾಲಿಸಿ ಮಾಡಿಸಿದ್ದು, 15 ವರ್ಷಗಳವರೆಗೆ ತಲಾ 1,200 ರು. ವಾರ್ಷಿಕ ಕಂತು ಪಾವತಿಸುವುದಾಗಿ ತಿಳಿಸಿದ ಶಾಸಕರು, ಇದನ್ನು ಮಾನವೀಯ ದೃಷ್ಟಿಯಿಂದ ಮಾಡುತ್ತಿದ್ದೇನೆಯೇ ಹೊರತು, ಚುನಾವಣಾ ಮುಂದಾಲೋಚನೆಯಿಂದಲ್ಲ ಎಂದು ತಿಳಿಸಿದರು.
ಸುಮಾರು 250ಕ್ಕೂ ಅಧಿಕ ಅಂಗವಿಕಲ ಮಕ್ಕಳಿಗೆ ಆರೋಗ್ಯ ತಪಾಸಣೆ ಮಾಡಲಾಯಿತು. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಮಕ್ಕಳಿಗೆ ಜಿಲ್ಲಾ ಕೇಂದ್ರದ ಆಸ್ಪತ್ರೆಗೆ ಶಿಫಾರಸು ಮಾಡಿ ಉಚಿತ ವೈದ್ಯಕೀಯ ನೆರವಿನ ಭರವಸೆ ನೀಡಲಾಯಿತು. ಮೈಸೂರಿನ ಕೆ.ಆರ್. ಆಸ್ಪತ್ರೆಯ ವೈದ್ಯೆ ಡಾ. ಮಂಜುಳಾದೇವಿ ನೇತೃತ್ವದ ತಂಡ ಮಕ್ಕಳ ಆರೋಗ್ಯ ತಪಾಸಣೆ ನಡೆಸಿತು.  
ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಟಿ. ಜವರೇಗೌಡ, ಕ್ಷೇತ್ರ ಸಮನ್ವಯಧಿಕಾರಿ ಡಾ.ಬಿ.ಸಿ. ದೊಡ್ಡೇಗೌಡ, ತಾಪಂ ಮಾಜಿ ಅಧ್ಯಕ್ಷೆ ಹೇಮಾವತಿಅಶೋಕ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಎ. ಕುಚೇಲ, ತಾಲೂಕು ಅಧ್ಯಕ್ಷ ನಾಗೇಶ್, ಉಪಾಧ್ಯಕ್ಷ ರಾಜಶೇಖರ್, ಪ್ರಧಾನ ಕಾರ್ಯದರ್ಶಿ ವಿಜಯ್ಕುಮರ್, ಪುರಸಭಾ ಸದಸ್ಯ ಪಿ. ವಿನಯ್, ಐಇಆರ್ಟಿ ಪುಟ್ಟಸ್ವಾಮಿ ಇದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.