ನೇಮಕಾತಿ ವಿರೋಧಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ
ಕ.ಪ್ರ.ವಾರ್ತೆ ಮೈಸೂರು ಜೂ. 19
ಆನ್ಲೈನ್ ಮೂಲಕ ಅತಿಥಿ ಉಪನ್ಯಾಸಕರ ನೇಮಕಾತಿ ವಿರೋಧಿಸಿ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಂಘದ ಪದಾಧಿಕಾರಿಗಳು ಕಾಲೇಜು ಶಿಕ್ಷಣ ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿ ಎದುರು ಮಂಗಳವಾರ ಪ್ರತಿಭಟಿಸಿದರು.
ಸರ್ಕಾರಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನೇ ನೇರವಾಗಿ ನೇಮಕಾತಿ ಮಾಡಿಕೊಳ್ಳಬೇಕು. ಆನ್ಲೈನ್ ಮೂಲಕ ನೇಮಕಾತಿ ಮಾಡುತ್ತಿರುವ ಕ್ರಮ ಸರಿಯಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಈ ವೇಳೆ ಸಂಘದ ಅಧ್ಯಕ್ಷ ಪ್ರದೀಪ್ಕುಮಾರ್ ಮಾತನಾಡಿ, ಹಿಂದಿನ ವರ್ಷಗಳಲ್ಲಿ ಸರ್ಕಾರ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯಲ್ಲಿ ವರ್ಷಕ್ಕೆ ಐದು ಅಂಕ ನೀಡುತ್ತಿದ್ದು, ಅದನ್ನು 2012-13ನೇ ಸಾಲಿನಲ್ಲಿ ನಾಲ್ಕು ಅಂಕಗಳಿಗೂ, ಈಗ ಮೂರು ಅಂಕಗಳಿಗೂ ಇಳಿಸುವ ಮೂಲಕ ನಮ್ಮ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿದೆ ಎಂದು ದೂರಿದರು.
ಮಹಾರಾಣಿ ಕಾಲೇಜಿನಲ್ಲಿ 43 ಮಂದಿ ಅತಿಥಿ ಉಪನ್ಯಾಸಕರಿಗೆ ಕಳೆದ 6 ತಿಂಗಳಿಂದ ಗೌರವಧನ ನೀಡಿಲ್ಲ. ಯುಜಿಸಿ ನಿಯಮಾವಳಿಯಲ್ಲಿ ಅತಿಥಿ ಉಪನ್ಯಾಸಕರಿಗೆ 25 ಸಾವಿರ ರು. ಗೌರವಧನ ನೀಡಬೇಕು ಎಂಬ ನಿಯಮ ಇದ್ದರೂ ಅದನ್ನು ಉಲ್ಲಂಘಿಸಿ ಕಡಿಮೆ ಗೌರವಧನ ನೀಡಲಾಗುತ್ತಿದೆ. ಆದ್ದರಿಂದ ಕನಿಷ್ಠ 15 ಸಾವಿರ ರು.ಗಳನ್ನಾದರೂ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.
ಎಂಎ, ಎಂಫಿಲ್ ಮಾಡಿರುವ ಅತಿಥಿ ಉಪನ್ಯಾಸಕರಿಗೆ ಎಂಎ, ಪಿಎಚ್ಡಿ ಮಾಡಿರುವ ಉಪನ್ಯಾಸಕರಿಗಿಂತ ಕಡಿಮೆ ವೇತನ ನೀಡಲಾಗುತ್ತಿದೆ. ಇದರಿಂದ ಅತಿಥಿ ಉಪನ್ಯಾಸಕರು ಜೀವನ ನಡೆಸುವುದೆ ಕಷ್ಟವಾಗುತ್ತಿದೆ ಎಂದು ಆರೋಪಿಸಿದರು.
ಸಂಘದ ಸಂಘಟನಾ ಸಂಯೋಜಕ ಹನುಮಂತೇಶ್, ಸಹ ಕಾರ್ಯದರ್ಶಿ ಡಿ.ಆರ್. ದಿವ್ಯಾ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

