ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಪ್ರತಿಭಟನೆ
ಕ.ಪ್ರ.ವಾರ್ತೆ ಮೈಸೂರು ಜೂ. 19
ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕಾರ್ಯಕರ್ತರು ಗಾಂಧಿಚೌಕದಲ್ಲಿ ಬುಧವಾರ ಮಧ್ಯಾಹ್ನ ಪ್ರತಿಭಟಿಸಿದರು.
ಡೀಸೆಲ್ ಬೆಲೆ ಏರಿಕೆ ಮತ್ತು ಸಿಬ್ಬಂದಿ ವೇತನ ಹೆಚ್ಚಳ ನೆಪವಾಗಿಸಿಕೊಂಡು ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಪ್ರಯಾಣ ದರ ಏರಿಸಿರುವುದು ಖಂಡನಿಯ. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಇದರಿಂದ ತೀವ್ರ ತೊಂದರೆ ಆಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರವು ಬಸ್ ಪ್ರಯಾಣ ದರವನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಕೇಂದ್ರ ಸರ್ಕಾರವು ಬೆಲೆ ಏರಿಕೆ ನಿಯಂತ್ರಿಸುವಲ್ಲಿ ವಿಫಲವಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ವಿದೇಶಿ ಬಂಡವಾಳ ಹೂಡಿಕೆಯಂತಹ ಜನ ವಿರೋಧಿ ನೀತಿಗಳನ್ನು ತಂದು ದೇಶದ ಬಡವರ ಬದುಕನ್ನು ಕಸಿಯಲು ಪ್ರಯತ್ನಿಸಿದೆ. ಈಗ ಕರ್ನಾಟಕದಲ್ಲಿ ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವೂ ಆರಂಭದಲ್ಲೇ ಪ್ರಯಾಣ ದರ ಹೆಚ್ಚಿಸಿ ಜನರ ಗಾಯದ ಮೇಲೆ ಬರೆ ಎಳೆದಿದೆ ಎಂದು ಅವರು ಆಗ್ರಹಿಸಿದರು.
ಗ್ರಾಮೀಣ ಪ್ರದೇಶದ ಬಡವರು, ರೈತರು ಹಲವು ಕಾರಣಗಳಿಗಾಗಿ ಪ್ರತಿನಿತ್ಯ ನಗರ ಪ್ರದೇಶಕ್ಕೆ ಬರಲು ಕೆಎಸ್‌ಆರ್‌ಟಿಸಿ ಬಸ್ಸುಗಳನ್ನು ಅವಲಂಬಿಸಿದ್ದಾರೆ. ಸಣ್ಣ ಆದಾಯದಲ್ಲಿ ಜೀವಿಸುತ್ತಿರುವ ಜನರಿಗೆ ಬಸ್ ಪ್ರಯಾಣ ದರ ಏರಿಕೆ ದೊಡ್ಡ ಹೊರೆಯಾಗಿದೆ. ಜನರ ಹಿತ ಕಾಪಾಡಲು ಸರ್ಕಾರ ಕೂಡಲೇ ತನ್ನ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದರು. ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಮೊಹಮ್ಮದ್ ಫೈಜಲ್, ಉಪಾಧ್ಯಕ್ಷ ಹುಸೇನ್, ಮುಖಂಡರಾದ ಅಮ್ಜದ್ ಖಾನ್, ಅಮಿನ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

