ನಾಳೆ ಬಸವೇಶ್ವರ ಜಯಂತಿ
ಪಿರಿಯಾಪಟ್ಟಣ: ಅಖಿಲ ಭಾರತ ವೀರಶೈವ ಮಹಾಸಭಾ, ಬಸವಜಯಂತಿ ಆಚರಣಾ ಸಮಿತಿ ಹಾಗೂ ಅಖಿಲ ಭಾರತ ಸಾಹಿತ್ಯ ಪರಿಷತ್ ವತಿಯಿಂದ ಜೂ. 21 ರಂದು ಇಲ್ಲಿನ ಸಾಯಿ ಸಮುದಾಯ ಭವನದಲ್ಲಿ ಬಸವೇಶ್ವರ ಜಯಂತಿ ಮಹೋತ್ಸವವನ್ನು ಏರ್ಪಡಿಸಿದೆ ಎಂದು ಬಸವ ಜಯಂತಿ ಆಚರಣಾ ಸಮಿತಿಯ ತಾ. ಅಧ್ಯಕ್ಷ ಪಿ.ಎನ್. ಚಂದ್ರಶೇಖರ್ ಹೇಳಿದ್ದಾರೆ. ಬೆ. 8.30 ಕ್ಕೆ ಇಲ್ಲಿನ ವೀರಭದ್ರೇಶ್ವರ ಸ್ವಾಮಿ ರೈಸ್ಮಿಲ್ ಮುಂಭಾಗದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ರಾವಂದೂರು ಮುರುಘಾ ಮಠದ ಮೋಕ್ಷಪತಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಬಸವೇಶ್ವರರ ಭಾವಚಿತ್ರ ಮತ್ತು ಕಲಾತಂಡಗಳ ಮೆರವಣಿಗೆಗೆ ದಿಂಡಗಾಡು ಬಸವಜ್ಯೋತಿ ಮಠದ ಅಪ್ಪಾಜಿ ಸ್ವಾಮಿಗಳು ಚಾಲನೆ ನೀಡುವರು. ಬೆ.11ಕ್ಕೆ ಪಟ್ಟಣದ ಸಾಯಿ ಸಮುದಾಯ ಭವನದಲ್ಲಿ ಸುತ್ತೂರು ಮಠದ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಸಾನಿಧ್ಯದಲ್ಲಿ ಬೆಟ್ಟದಪುರ ಸ್ವತಂತ್ರ ಸಲಿಲಾಖ್ಯ ವಿರಕ್ತ ಮಠದ ಚನ್ನಬಸವದೇಶಿಕೇಂದ್ರ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಶಾಸಕ ಕೆ. ವೆಂಕಟೇಶ್ ಉದ್ಘಾಟಿಸುವರು. ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಅರಕಲಗೂಡು ದೊಡ್ಡಮಠದ ಮಲ್ಲಿಕಾರ್ಜುನಸ್ವಾಮೀಜಿ, ಸಚಿವ ಮಹದೇವ್ಪ್ರಸಾದ್, ಮಾಜಿ ಸಚಿವ ಎಂ. ಮಹದೇವ್, ಮಾಜಿ ಶಾಸಕರಾದ ಎಚ್.ಸಿ. ಬಸವರಾಜು, ಪರಿಮಳ ನಾಗಪ್ಪ ಭಾಗವಹಿಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

